

ಕೊಳ್ಳೇಗಾಲ: ಕಾರ್ಮಿಕರ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುವ ವಿವಿಧ ಸೌಲಭ್ಯಗಳ ಅರಿವು ಪಡೆದುಕೊಳ್ಳಿ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್ ಸಲಹೆ ನೀಡಿದರು.
ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಗುರುವಾರ ತಾಲೂಕು ಆಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕೊಳ್ಳೇಗಾಲ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಲ್ಯಾಣ ಕಾರ್ಮಿಕರ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಚಾಮ ರಾಜನಗರ ಇವರ ಸಹಯೋಗದಲ್ಲಿ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳು, ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಸುನೀತಾ ಮಾತನಾಡಿ, ಕಾಲ ಬದಲಾದಂತೆ ನಾವೆಲ್ಲರೂ ಬದಲಾಗಬೇಕು. ಅದರೊಂದಿಗೆ ನಾವು ಹೋದಾಗ ನಮ್ಮ ಅಭಿವೃದ್ಧಿ ಸಾಧ್ಯ. ಯೋಜನೆಗಳ ಬಗ್ಗೆ ಜನತೆಗೆ ವಿಷಯ ಸಮರ್ಪಕವಾಗಿ ತಲುಪಿರುವುದಿಲ್ಲ. ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು ಮುಖ್ಯವಾಗಿದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಎಂ.ಸವಿತಾ ಅವರು ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿರುವ ಕಾರ್ಯಾಗಾರ ಕುರಿತು ಮಾಹಿತಿ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಸಿ.ರವಿ, ಉಪಾಧ್ಯಕ್ಷೆ ಸಿ.ಆರ್ ನಿರ್ಮಲಾ, ಕಾರ್ಯದರ್ಶಿ ಸಿ.ಬಿ. ಮಹೇಶ್‌ಕುಮಾರ್, ಕಾರ್ಮಿಕ ನಿರೀಕ್ಷಕ ವಿ.ಎಲ್. ಪ್ರಸಾದ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಮಹೇಶ್ ಇದ್ದರು.