ಸರ್ಕಾರವನ್ನ ಅಲ್ಲಿಗಾಡಿಸಿದರೆ ರಾಜ್ಯದಲ್ಲಿ ರಕ್ತ ಕ್ರಾಂತಿ ಕೆ.ಎಂ.ಶಿ

ಸರ್ಕಾರವನ್ನ ಅಲ್ಲಿಗಾಡಿಸಿದರೆ ರಾಜ್ಯದಲ್ಲಿ ರಕ್ತ ಕ್ರಾಂತಿ ಕೆ.ಎಂ.ಶಿ
Published on

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಸರ್ಕಾರವನ್ನ ಅಲ್ಲಿಗಾಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂಬ ಗುಮಾನಿ ಇದ್ದು, ಇದು ನಿಜವಾದರೆ ರಾಜ್ಯದಲ್ಲಿ ರಕ್ತ ಕ್ರಾಂತಿಯಾಗಲಿದೆ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ ನೀಡಿದರು.
ಸುದ್ದಿಗಾರರೂಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರನ್ನು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದ್ದು, ಇದು ಬಹುಶಃ ನಿಜ ಆಗಬಹುದು. ಅದಕ್ಕಾಗಿ ಈಗಲೇ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾನೆೆ, ಹಾಗೇನಾದರು ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೋರಾಟಕ್ಕೆ ತಯಾರಾಗಿ, ಈ ರಾಜ್ಯದಲ್ಲಿ ಯುದ್ಧವನ್ನೇ ಮಾಡಬೇಕಾಗುತ್ತದೆ ಎಂದು ಹೇಳಿದರು.
ಒಂದು ಇಂಚು ಸಿದ್ದರಾಮಯ್ಯ ಅಲುಗಾಡಿಸಿದರೆ ರಾಜ್ಯದಲ್ಲಿ ಹೋರಾಟಕ್ಕೆ ನಾವು ತಯಾರಾಗಿದ್ದೇವೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ಮುಂಬಾಗಲಿನಿಂದ ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ಆಡಳಿತ ನಡೆಸಿದೆ. ಈ ಬಾರಿ ಪುನಃ ಇದೇ ಆಟವನ್ನು ಆಡಲು ಬಿಜೆಪಿಯವರು ಹೊರಟಿದ್ದಾರೆ. 136 ಸ್ಥಾನ ಪಡೆದು ಸರ್ಕಾರ ರಚಿಸಿರುವ ನಮ್ಮನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧ, ರಕ್ತ ಕ್ರಾಂತಿ ಆಗುತ್ತದೆ ಇದು ಬಿಜೆಪಿಗೆಯವರಿಗೆ ಎಚ್ಚರಿಕೆ.ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ, ಈ ಬಾರಿ ಅದು ನಡೆಯಲ್ಲ. ಹಾಗೇನಾದರೂ ನೀವು ಅನಿವಾರ್ಯವಾಗಿ ಪ್ರಾಸಿಕ್ಯೂಷನ್‌ಗೆ ನೋಟೀಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸತ್ಯಶೋಧನೆ ಸಮಿತಿ ಸಭೆ ನಡೆಸಿದ್ದೇವೆ. ಬಿಜೆಪಿ ತನ್ನ ವರ್ತನೆ ಬದಲಿಸಿಕೊಳ್ಳದಿದ್ದರೆ ಕೇಂದ್ರ ಸರ್ಕಾರ ಹಾಗು ಬಿಜೆಪಿ ಪಕ್ಷದ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ. ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net