ಸರ್ಕಾರಿ ಅನುದಾನಿತ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮೊಟ್ಟೆ !

egggg
Published on

ರಾಮನಗರ ಸರ್ಕಾರಿ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ರಾಮನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪೂರಕ ಪೌಷ್ಟಿಕ ಆಹಾರ ವಿತರಣೆ (ಮೊಟ್ಟೆ, ಚುಕ್ಕಿ ಮತ್ತು ಬಾಳೆಹಣ್ಣು) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಸರ್ಕಾರ ಹಾಗೂ ಅಜೀಂ ಪ್ರೇಮ್ ಜೀ ಸಂಸ್ಥೆ ಸಹಯೋಗದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಇದರಿಂದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ 66 ಸಾವಿರ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತದೆ.

ವಿದ್ಯಾರ್ಥಿಗಳಿಗೆ ಸರ್ಕಾರ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಸೇರಿ ಸರ್ವತೋಮುಖ ಬೆಳವಣಿಗೆ ಅಗತ್ಯವಾಗಿ ಬೇಕಾಗಿರುವ ಎಲ್ಲ ಸೌಲಭ್ಯ ಒದಗಿಸಿಕೊಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಮಕ್ಕಳಿಗೆ ಬಿಸಿಯೂಟದೊಂದಿಗೆ ಚಿಕ್ಕಿ, ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಲಾಯಿತು.
ಶಿಕ್ಷಣ ಇಲಾಖೆ ಡಿಡಿಪಿಐ ಬಸವರಾಜೇಗೌಡ, ಬಿಇಒ ಸೋಮಲಿಂಗಯ್ಯ, ಇಲಾಖೆ ಅಧಿಕಾರಿಗಳಾದ ಸೋಮಶೇಖರ್, ಸಿದ್ದರಾಜು, ರಾಜಶೇಖರಯ್ಯ, ಸಂತೋಷ್ ಇದ್ದರು.

ನಾನು ಜಿಲ್ಲಾ ಪಂಚಾಯಿತಿ ಅಧ್ಯಕ್ಷನಾಗಿದ್ದ ವೇಳೆ ರಾಮನಗರ ಜಿಲ್ಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು 26ನೇ ಸ್ಥಾನ ಪಡೆದುಕೊಂಡಿದೆ. ಹಾಗಾಗಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮುಂದುವರಿಸಬೇಕು. ಇದು ವೈಯಕ್ತಿಕವಾಗಿ ಹಾಗೂ ರಾಜ್ಯದಲ್ಲಿ ಜಿಲ್ಲೆ ಹೆಸರು ಮಾಡಲು ಅನುಕೂಲವಾಗಲಿದೆ.ಎಚ್.ಎ. ಇಕ್ಬಾಲ್ ಹುಸೇನ್ ಶಾಸಕರು, ರಾಮನಗರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net