ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯಿಂದ ಪ್ರತಿಭಟನೆ

FEBRA., 10, HNP., Ph.1.
Published on

ಹೊಳೆನರಸೀಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆ ನೌಕರನ ಮೇಲಿನ ಹಲ್ಲೆ ಖಂಡಿಸಿ ಸೋಮವಾರ ಕರ್ತವ್ಯದಿಂದ ಸಿಬ್ಬಂದಿ ಹೊರಗುಳಿದು ಮೌನ ಪ್ರತಿಭಟನೆ ನಡೆಸಿದರು.

ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಶುಕ್ರವಾರ ರಾತ್ರಿ 9.45ರಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ರೂಪ್ ಡಿ ನೌಕರ ನಾಗರಾಜು ಅವರಿಗೆ ಕುಮಾರ, ಕೃಷ್ಣಮೂರ್ತಿ ಹಾಗೂ ಇನ್ನೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಬಳಿಕ ತಾಲೂಕು ಕಚೇರಿಗೆ ವೈದ್ಯರು ಹಾಗೂ ಸಿಬ್ಬಂದಿ ತೆರಳಿ ತಹಸೀಲ್ದಾರ್‌ಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ್, ವೈದ್ಯರು, ವೃತ್ತ ನಿರೀಕ್ಷಕರೊಂದಿಗೆ ಸಭೆ ನಡೆಸಿ, ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣ ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರಿಗೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net