ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರಕಿಸಲು ಪಣ

28 YLP 01 (Lasike)
Published on

ಯಲ್ಲಾಪುರ: ಜಿಲ್ಲೆಯಲ್ಲಿ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಜನರಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಎಲ್ಲ ರೀತಿಯ ಚಿಕಿತ್ಸೆ, ಔಷಧಗಳು ದೊರಕುವಂತೆ ಮಾಡುವ ಪಣ ತೊಟ್ಟಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವಾರದಲ್ಲಿ ಉದ್ಯಮಿ ಬಾಲಕೃಷ್ಣ ನಾಯಕ ಅವರು 13 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ವಿುಸಿದ ಕೋವಿಡ್ ಲಸಿಕೆ ವಿತರಣೆ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಂಎಲ್​ಸಿ ಶಾಂತಾರಾಮ ಸಿದ್ದಿ, ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿದರು. ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ, ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ್, ಪಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಅಮಿತ್ ಅಂಗಡಿ, ಸದಸ್ಯರಾದ ಕಲ್ಪನಾ ನಾಯ್ಕ, ಸತೀಶ ನಾಯ್ಕ, ತಾ.ಪಂ ಆಡಳಿತಾಧಿಕಾರಿ ನಟರಾಜ ಟಿ.ಪಿ., ಪ್ರಮುಖರಾದ ವಿಜಯ ಮಿರಾಶಿ, ಶಿರೀಷ ಪ್ರಭು ಇತರರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ ಸ್ವಾಗತಿಸಿ, ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net