ಸರ್ಕಾರಿ ಐಟಿಐ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ

1
Published on

ಗುಂಡ್ಲುಪೇಟೆ: ತಾಲೂಕಿನ ಎಲ್ಲ ಐಟಿಐ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಸವಲತ್ತುಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ತಾಲೂಕಿನ ಬೇಗೂರು ಗ್ರಾಮದ ಐಟಿಐ ಕಾಲೇಜಿಗೆ 1.3 ಕೋಟಿ ರೂ. ವೆಚ್ಚದಲ್ಲಿ ಸುತ್ತುಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣ ಬೇಗೂರು ಹಾಗೂ ತಾಲೂಕಿನ ತೆರಕಣಾಂಬಿ ಗ್ರಾಮಗಳಲ್ಲಿ ಸರ್ಕಾರಿ ಐಟಿಐ ಕಾಲೇಜುಗಳಿದ್ದು, ಖಾಸಗಿ ಕಾಲೇಜುಗಳಿಗಿಂತಲೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಸರ್ಕಾರದಿಂದ ಅಗತ್ಯ ಸವಲತ್ತುಗಳನ್ನು ನೀಡಲಾಗುತ್ತಿದೆ. ಈ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೇವಲ ತರಬೇತಿ ನೀಡುವ ಬದಲಿಗೆ ಟಾಟಾ ಸಂಸ್ಥೆಯ ನೆರವಿನಿಂದ ಉದ್ಯೋಗ ಆಧಾರಿತ ಶಿಕ್ಷಣ ನೀಡಲಾಗುತ್ತಿದೆ. ಇದರಿಂದ ತರಬೇತಿ ಪಡೆದ ನಂತರ ಕೂಡಲೇ ಉದ್ಯೋಗ ದೊರಕುವಂತಾಗಿದ್ದು, ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರಕಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ಆರ್.ಲೋಕೇಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್, ಎಪಿಎಂಸಿ ಅಧ್ಯಕ್ಷ ರವಿ, ಕೋಟೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net