ಸರ್ಕಾರಿ ಕಚೇರಿಗಳಲ್ಲಿ ಮೂಲ ಸೌಲಭ್ಯಕ್ಕೆ ಆದ್ಯತೆ ನೀಡಿ

Give priority to basic facility in government offices
ವಿಜಯಪುರ ಜಿಲ್ಲಾಡಳಿತ ಕಚೇರಿ ಆವರಣದಲ್ಲಿರುವ ವಿವಿಧ ಇಲಾಖೆಗಳಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸ್ವಚ್ಛತಾ ಕಾರ್ಯ ನಡೆಸಿದರು. ಮಹಾದೇವ ಮುರಗಿ, ವಿಜಯಕುಮಾರ ಮೆಕ್ಕಳಕಿ, ಮಹಾವೀರ ಬೋರಣ್ಣವರ ಮತ್ತಿತರರಿದ್ದಾರೆ.
Published on

ವಿಜಯಪುರ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಹಾಗೂ ಮೂಲ ಸೌಲಭ್ಯಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಬೆಳಗ್ಗೆ ಜಿಲ್ಲಾಡಳಿತ ಕಚೇರಿ ಆವರಣದಲ್ಲಿನ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದ ಬೇರೆ-ಬೇರೆ ಇಲಾಖೆಯ ಕಚೇರಿಯ ಆವರಣದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಅಲ್ಲಿ ಮೂಲ ಸೌಲಭ್ಯ ಹೊಂದಿರಬೇಕೆಂಬ ಸರ್ಕಾರದ ಆಶಯದಂತೆ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣ ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ಮಿನಿ ವಿಧಾನಸೌಧ, ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಸ್ವಚ್ಛತೆಯ ಕುರಿತು ಜನರಿಗೆ ಅರಿವು ಮೂಡಿಸಿದರು.

ಕಾರ್ಯ ನಿಮಿತ್ತ ಸರ್ಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಗೃಹ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಸರ್ಕಾರಿ ಕಚೇರಿಯ ಸ್ವಚ್ಚತೆಯ ನಿರ್ವಹಣೆಯಲ್ಲಿಯೂ ಸಾರ್ವಜನಿಕರು ಸಹಕಾರ ನೀಡಬೇಕು. ಸ್ವಚ್ಛತೆಗೆ ಎಲ್ಲರೂ ಕೈಜೋಡಿಸಬೇಕು. ನಾವು ವಾಸಿಸುವ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕೆಂದು ಮನವಿ ಮಾಡಿದ ಅವರು, ಈ ನಿಟ್ಟಿನಲ್ಲಿ ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಕೋಶ, ಜಿಲ್ಲಾ ಖಜಾನೆ, ಕೆಸ್ವಾನ ಆವರಣ ಮುಂಭಾಗದ ಉದ್ಯಾನವನದ ಸ್ವಚ್ಛತೆ ಕಾರ್ಯ ನಿರ್ವಹಿಸಲಾಯಿತು. ಸ್ವತಃ ಜಿಲ್ಲಾಧಿಕಾರಿಗಳು ಮುಂಚೂಣಿಯಲ್ಲಿ ಇದ್ದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ನಗರಾಭಿವೃದ್ಧಿ ಕೋಶದ ಅಧಿಕಾರಿ ವಿಜಯಕುಮಾರ ಮೆಕ್ಕಳಕಿ, ಮಹಾವೀರ ಬೋರಣ್ಣವರ, ರಾಜು ಹಾದಿಮನಿ, ಡಿ.ವೈ. ಕಟ್ಟಿಮನಿ, ಎಂ.ಎಂ. ಚಟ್ಟರಕಿ, ಮಹಾಂತೇಶ ಹಿರೇಮಠ, ಎಸ್.ಬಿ. ಅಕ್ಕಲಕೋಟ, ಪವನ್ ನಿಂಬಾಳ್ಕರ್, ಅಜಯ ಗಾಯಕವಾಡ, ವಿದ್ಯಾಧರ ನ್ಯಾಮಗೌಡ, ಅನಿಲ ರಾಠೋಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net