ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ದಂಪತಿಗೆ ಜೈಲು

Crime Logo
Published on

ಚಾಮರಾಜನಗರ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅಸಭ್ಯವಾಗಿ ವರ್ತಿಸಿದ ದಂಪತಿಗೆ ಒಂದು ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಮೈಸೂರಿನ ರಾಮಕೃಷ್ಣ ನಗರದ ಶ್ರೀನಿವಾಸ ಮತ್ತು ಇವರ ಪತ್ನಿ ಮಮತಾ ಶಿಕ್ಷೆಗೆ ಗುರಿಯಾದವರು. ಇವರು 2022ರ ಅ.14ರಂದು ತಾಲೂಕು ಕಚೇರಿಯಲ್ಲಿ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ತಹಸೀಲ್ದಾರ್ ಮತ್ತು ರಾಜಸ್ವ ನಿರೀಕ್ಷಕರು ಹಾಗೂ ಸಮಿತಿಯ ಸದಸ್ಯರು ಇದ್ದರು. ಸಂಜೆ 7.15ರ ಸಮಯದಲ್ಲಿ ಶ್ರೀನಿವಾಸ ಮತ್ತು ಇವರ ಪತ್ನಿ ಮಮತಾ ಪ್ರವೇಶಿಸಿ ಏರುಧ್ವನಿಯಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ಆರೋಪಿತರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವನ್ನು ಚಾಮರಾಜನಗರದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಅಪರಾಧಿಗಳ ತಪ್ಪು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಆರ್.ಸುನೀಲ್ ಅವರು ದಂಪತಿಗೆ ಒಂದು ವರ್ಷ ಸಾದಾ ಕಾರಾಗೃಹವಾಸ ಮತ್ತು 2 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಸಹಾಯಕ ಸರ್ಕಾರಿ ಅಭಿಯೋಜಕ ಮಹಮ್ಮದ್ ವಸೀಂವುಲ್ಲಾ ವಾದ ಮಂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net