ಸರ್ಕಾರಿ ಕಾರ್ಯಕ್ರಮದಲ್ಲಿ ಮುಖಂಡನ ಪರ ಘೋಷಣೆ: ಶಿವಾಜಿ- ಸವಿತಾ ಮಹರ್ಷಿ ಜಯಂತಿ ವೇಳೆ ಎರಡು ಗುಂಪಿನ ಮಧ್ಯೆ ಗಲಾಟೆ !

IMG-20210219-WA0059
Published on

ವಿಜಯಪುರ: ಶಿವಾಜಿ ಹಾಗೂ ಸವಿತಾ ಮಹರ್ಷಿ ಜಯಂತಿ ಅಚರಣೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಎರಡು ಉಭಯ ಮಹಾತ್ಮರ ಜಯಂತಿ ವೇಳೆ ಈ ಘಟನೆ ಸಂಭವಿಸಿದೆ.

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಜಯಂತಿ ಆಚರಿಸಲಾಗುತ್ತಿತ್ತು.

ಮರಾಠ ಸಮುದಾಯ ಹಾಗೂ ಸವಿತಾ ಸಮಾಜದವರೂ ಒಟ್ಟಿಗೆ ಭಾಗಿಯಾಗಿದ್ದರು. ಈ ವೇಳೆ ಸಮಾಜವೊಂದರ ಮುಖಂಡರ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ ಗಲಾಟೆ ಸಂಭವಿಸಿತು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ

ಪ್ರಗತಿ ಪರ ಸಂಘಟನೆಗಳ ಕಾರ್ಯಕರ್ತರಿಂದ ವಿರೋಧ ಘೋಷಣೆಗೆ ವಿರೋಧ ವ್ಯಕ್ತವಾಯಿತು.

ಸರ್ಕಾರಿ ಕಾರ್ಯಕ್ರಮದಲ್ಲಿ ನಿಮ್ಮ ಸಮಾಜದ ಮುಖಂಡರ ಪರ ಘೋಷಣೆ ಕೂಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಆಗ

ಪರಸ್ಪರ ಮಾತಿನ ಚಕಮಕಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net