ಸರ್ಕಾರಿ ನೌಕರರ ಮಕ್ಕಳಿಗೆ ಅ.18ರಂದು ಪ್ರತಿಭಾ ಪುರಸ್ಕಾರ

ಸರ್ಕಾರಿ ನೌಕರರ ಮಕ್ಕಳಿಗೆ ಅ.18ರಂದು ಪ್ರತಿಭಾ ಪುರಸ್ಕಾರ
Published on

ಹಾಸನ: ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸರ್ಕಾರಿ ನೌಕರರ ಮಕ್ಕಳಿಗೆ ಅ.18ರಂದು ಪ್ರತಿಭಾ ಪುರಸ್ಕಾರವನ್ನು ಸರ್ಕಾರಿ ನೌಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, 2022-23ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಅ.18ರಂದು ಅರಸೀಕೆರೆಯ ಕಸ್ತೂರಿ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಆಡಿಟೋರಿಯಂನಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ 216, ಪಿಯುಸಿಯಲ್ಲಿ 175 ಸೇರಿ ಒಟ್ಟು 381 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಶಿವಲಿಂಗೇಗೌಡ, ನಮ್ಮ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರು ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು,

ಸುದ್ದಿಗೋಷ್ಠಿಯಲ್ಲಿ ಸರ್ಕಾರಿ ನೌಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಶಿವಸ್ವಾಮಿ, ಅರಸೀಕೆರೆ ತಾಲೂಕು ಘಟಕದ ಅಧ್ಯಕ್ಷ ಅಶೋಕ್ ಕುಮಾರ್, ಕಾರ್ಯದರ್ಶಿ ಶಿವಾನಂದನಾಯ್ಕ, ಖಜಾಂಚಿ ಪ್ರಭು, ನಿಕಟ ಪೂರ್ವ ಅಧ್ಯಕ್ಷ ಗೋವಿಂದರಾಜ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net