ಸರ್ಕಾರಿ ನೌಕರರ ವಸತಿ ಸಂಕೀರ್ಣ ನಿರ್ಮಾಣಕ್ಕೆ ₹1 ಕೋಟಿ ಅನುದಾನ ಮಂಜೂರು: ಸಚಿವ ಆರಗ ಜ್ಞಾನೇಂದ್ರ

TTH WEEEB
Published on

ತೀರ್ಥಹಳ್ಳಿ: ಪಟ್ಟಣದಲ್ಲಿ ಸರ್ಕಾರಿ ನೌಕರರಿಗೆ 12 ವಸತಿ ಗೃಹಗಳನ್ನು ನಿರ್ಮಿಸಲು ಒಂದು ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಮಂಗಳವಾರ ತಾಪಂ ನೂತನ ಕಟ್ಟಡದ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ತಾಲೂಕು ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಪಟ್ಟಣದಲ್ಲಿ ವಸತಿ ಸೌಕರ್ಯದ ಕೊರತೆಯಿಂದ ಶಿವಮೊಗ್ಗದಲ್ಲಿ ವಾಸಿಸುತ್ತಿದ್ದಾರೆ. ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರು ತಾಲೂಕು ಕೇಂದ್ರದಲ್ಲೇ ನೆಲೆಸುವಂತೆ ಅನುಕೂಲ ಕಲ್ಪಿಸಲು ವಸತಿ ಗೃಹ ನಿರ್ಮಿಸಲಾಗುತ್ತಿದ್ದು, ಮುಂದಿನ ತಿಂಗಳು ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಪ್ರವಾಸಿ ಮಂದಿರದ ವಿಸ್ತರಣಾ ಕಟ್ಟಡ ನಿರ್ಮಾಣಕ್ಕೂ 5 ಕೋಟಿ ರೂ. ಮಂಜೂರಾಗಿದೆ. ಸರ್ಕಾರಿ ಕಾಲೇಜು ಸಮೀಪ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ, ಬೈಪಾಸ್ ರಸ್ತೆ, ನೂತನ ಪೊಲೀಸ್ ಠಾಣೆ ಹಾಗೂ ಅಧಿಕಾರಿಗಳ ವಸತಿ ಗೃಹ, ಅಗ್ನಿಶಾಮಕ ದಳ ಘಟಕ ಹೀಗೆ ಪಟ್ಟಣ ವ್ಯಾಪ್ತಿಗೆ ಸೀಮಿತವಾಗಿ 100 ಕೋಟಿ ರೂ.ಗೂ ಅಧಿಕ ಅನುದಾನ ಬಂದಿದೆ. ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪನೆ, ಕೋಣಂದೂರು ಠಾಣೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಯತ್ನ ನಡೆದಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net