ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರು ಮಾತ್ರ ಭಾಗವಹಿಸಬೇಕು. ಒಂದು ತಂಡದಲ್ಲಿ 8-12 ಜನರು ಭಾಗವಹಿಸಬೇಕು.
ಪ್ರಥಮ ಬಹುಮಾನ 1 ಲಕ್ಷ ರೂ, ದ್ವಿತೀಯ ಬಹುಮಾನ 75,000 ರೂ, ತೃತೀಯ ಬಹುಮಾನ 50,000 ರೂ, ಹಾಗೂ ಸಮಾಧಾನಕರ ಬಹುಮಾನ 20,000 ರೂ, ನಿಗದಿಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ನ.2 ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸ್ಪರ್ಧೆಗಳು ನಡೆಯುವ ಸ್ಥಳ ಮತ್ತು ಕಾರ್ಯಕ್ರಮದ ವಿವರಗಳನ್ನು ನೋಂದಣಿಯ ಅಂತಿಮ ದಿನಾಂಕದ ಬಳಿಕ ತಿಳಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಡಾ.ಸಿ.ಎನ್.ರೇಣುಕಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.