ಸರ್ಕಾರಿ ಬಸ್ ಹರಿದು ವೃದ್ಧೆ ಸಾವು

crime
Published on

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ ಹರಿದು ವೃದ್ಧೆಯೋರ್ವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರು ತಾಲೂಕು ಬಿಕ್ಕೋಡು ಗ್ರಾಮದ ಪುಟ್ಟಮ್ಮ(೮೦) ಬಸ್ ಹರಿದು ಮೃತಪಟ್ಟಿರುವ ದುರ್ದೈವಿ.

ಬಸ್ ನಿಲ್ದಾಣದಲ್ಲಿ ಬಸ್ ಟರ್ನ್ ಮಾಡುವ ವೇಳೆ ಬಸ್ ವೃದ್ಧೆಗೆ ಗುದ್ದಿದೆ. ಈ ವೇಳೆ ವೃದ್ಧೆ ಬಸ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಚಕ್ರ ವೃದ್ಧೆಯ ಹೊಟ್ಟೆಯ ಮೇಲೆಯೇ ಹತ್ತಿದ ಪರಿಣಾಮ ಕರುಳು ಹೊಟ್ಟೆಯಿಂದ ಹೊರಬಂದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಪುಟ್ಟಮ್ಮ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಚಿಕಿತ್ಸೆ ಪಡೆದು ವಾಪಸ್ ತಮ್ಮ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಆಗಮಿಸಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಸಂಬAಧ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net