

ಹಾಸನ: ಯೋಗ ಮಾಡುವುದರಿಂದ ಮನುಷ್ಯ ಎಲ್ಲಾ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಬಹುದಾಗಿದೆ ಎಂದು ಪತಾಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ ಟ್ರಸ್ಟ್ ಜಿಲ್ಲಾ ಪ್ರಭಾರಿ ಹಾಗೂ ಮಾಜಿ ಸೈನಿಕ ಶೇಷಪ್ಪ ಹೇಳಿದರು.
ನಗರದ ಎಂ.ಜಿ. ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ದೈಹಿಕ ಶಿಕ್ಷಣ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಹ ಮತ್ತು ಆತ್ಮವನ್ನು ಸ್ಥಿರವಾಗಿಟ್ಟುಕೊಳ್ಳುವುದಕ್ಕೆ ಯೋಗ ಸಹಾಯ ಮಾಡುತ್ತದೆ. ನಮಗೆ ಸಿಗುವ 24 ಗಂಟೆಗಳಲ್ಲಿ ಒಂದು ಗಂಟೆಯನ್ನು ಯೋಗಕ್ಕಾಗಿ ಸಮಯವನ್ನು ಮೀಸಲಿಡಬೇಕು ಎಂದರು.
ಯೋಗವನ್ನು ಬ್ರಾಹ್ಮಿ ಮೂಹೂರ್ತದಲ್ಲಿ ಮಾಡುವುದು ಆರೋಗ್ಯಕ್ಕೆ ಹೆಚ್ಚು ಅನುಕೂಲಕರವಾಗಲಿದೆ. ಯೋಗದಿಂದ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸುವ ಶಕ್ತಿ ಯೋಗಕ್ಕೆ ಇದೆ. ನಮ್ಮ ಭಾರತ ಯೋಗ ಆಚಾರ ವಿಚಾರ ಸಂಸ್ಕೃತಿಯನ್ನು ತಿಳಿಸುತ್ತದೆ ಎಂದು ಹೇಳಿದರು.
ಐಕ್ಯೂಎಸಿ ಸಂಚಾಲಕ ಯೋಗೇಶ್ ಮಾತನಾಡಿ, ನಾವೆಲ್ಲರೂ ಇಂದು ಒಂಬತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 171 ರಾಷ್ಟ್ರಗಳಲ್ಲಿ ಇಂದು ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ಹುಟ್ಟಿದ್ದು ನಮ್ಮ ದೇಶದಲ್ಲಿ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸು ನಿಯಂತ್ರಣದಲ್ಲಿರುತ್ತದೆ. 2014ರಲ್ಲಿ ವಿಶ್ವ ಸಂಸ್ಥೆ ಇದರ ಆಚರಣೆಗೆ ಅನುಮೋದನೆ ನೀಡಿ ನಂತರ 2015 ರಿಂದ ಈ ಆಚರಣೆಯನ್ನು ಜಾರಿಗೆ ತಂದಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಕೆ. ಗುರುರಾಜು ಮಾತನಾಡಿ, ಯುವಕರಿಂದ ವೃದ್ಧರವರೆಗೂ ಯೋಗದ ಅವಶ್ಯಕತೆ ಇದೆ. ಮನುಷ್ಯನ ಪ್ರತಿ ಹಂತದಲ್ಲೂ ಯೋಗಾಸನದ ಅವಶ್ಯಕತೆ ಇದ್ದು, ಮನುಷ್ಯನ ದೇಹದ ಮೇಲೆ ಆಗುವ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಯೋಗ ಸಹಕಾರಿಯಾಗಿ ಕೆಲಸ ಮಾಡಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಯೋಗಾಸನದ ಕೆಲವು ಆಸನಗಳನ್ನು ಹೇಳಿಕೊಡಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸಂಚಾಲಕ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಪಿ. ಯೋಗೇಶ್ ಹಾಗು ಇತರರು