ಸರ್ಕಾರಿ ಯೋಜನೆ ಸದ್ಬಳಕೆಯಾಗಲಿ

web4
ಗೋಕಾಕ ನಗರದ ಎನ್‌ಎಸ್‌ಎಫ್ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತ್ರಿಚಕ್ರ ವಾಹನ ವಿತರಿಸಿದರು. ಮಲ್ಲು ಪಾಟೀಲ, ಡಾ.ರಾಜೇಂದ್ರ ಸಣ್ಣಕ್ಕಿ, ಸುಭಾಸ ಪಾಟೀಲ, ಮುತ್ತೆಪ್ಪ ಖಾನಪ್ಪಗೋಳ, ಸುಭಾಷ ಪಡದಲ್ಲಿ ಇತರರು ಇದ್ದರು.
Published on

ಗೋಕಾಕ: ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ತ್ರಿಚಕ್ರ ವಾಹನ ವಿತರಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿನ ಎನ್‌ಎಸ್‌ಎಫ್ ಆವರಣದಲ್ಲಿ 2022-23ನೇ ಸಾಲಿನ ಅಂಗವಿಕಲ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಶುಕ್ರವಾರ ವಿತರಿಸಿ ಮಾತನಾಡಿದರು.

ಅರಬಾವಿ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನಗಳನ್ನು ನೀಡುವುದು ಬಾಕಿ ಇದೆ. ಹೆಚ್ಚುವರಿ ಯಾದಿ ಆಧಾರದ ಮೇಲೆ ತುರ್ತಾಗಿ ನಾಲ್ವರು ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ. ಬಾಕಿ ಉಳಿದಿರುವ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ಹಂತ ಹಂತವಾಗಿ ನೀಡುವ ವ್ಯವಸ್ಥೆ ಮಾಡಿಕೊಡಲಾಗುವುದು. ತಮ್ಮ ಕೆಲಸ ನಿರ್ವಹಿಸಲು ಇಂತಹ ತ್ರಿಚಕ್ರ ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಂಗವಿಕಲರ ಕಲ್ಯಾಣಕ್ಕಾಗಿ ನಾವು ಸದಾ ಬದ್ಧರಿದ್ದೇವೆ ಎಂದರು.

ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಮುತ್ತೆಪ್ಪ ಖಾನಪ್ಪಗೋಳ, ಸುಭಾಸ ಪಡದಲ್ಲಿ, ಶಿವಾನಂದ ಕಮತಿ, ಸಂಗಪ್ಪ ಸೂರಣ್ಣವರ, ಭೀಮಶಿ ಅಂತರಗಟ್ಟಿ, ರಾಜು ಬಳಿಗಾರ, ರಾಮನಾಯ್ಕ ನಾಯ್ಕ, ಶಬ್ಬೀರ್ ತಾಂಬಿಟಗಾರ, ಬಾಳಪ್ಪ ಕಪರಟ್ಟಿ, ವಾಶಪ್ಪ ಪಂಡ್ರೊಳ್ಳಿ, ಪಿ.ಎಲ್. ಬಬಲಿ, ಕಲ್ಲಪ್ಪ ಕುದರಿ, ಬೈರು ಯಕ್ಕುಂಡಿ, ಬಸವರಾಜ ಪಂಡ್ರೊಳ್ಳಿ, ಸುನೀಲ ಭೋವಿ, ಬಸು ಕಾಡಾಪುರ, ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಶಮ್ಮು ಖೈರದಿ ಇತರರು ಇದ್ದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿವಾಪುರ(ಹ) ಗ್ರಾಮದ ಮಹೇಶ ಮಹಾದೇವ ಮುಧೋಳ, ಹುಣಶ್ಯಾಳ ಪಿಜಿ ಗ್ರಾಮದ ಭೀಮವ್ವ ಲಗಮಣ್ಣ ಸುಂಕದ, ರಾಜಾಪುರ ಗ್ರಾಮದ ಗೌರವ್ವ ವಾಶಪ್ಪ ಪಂಡ್ರೊಳ್ಳಿ, ಕೌಜಲಗಿ ಗ್ರಾಮದ ಸದಾಶಿವ ವೆಂಕಪ್ಪ ಭೋವಿ ಅವರಿಗೆ ತ್ರಿಚಕ್ರ ವಾಹನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net