ಸರ್ಕಾರಿ ಯೋಜನೆಗಳ ಅರಿವು ಮೂಡಿಸಲಿ

1
Published on

ಗೋಕಾಕ: ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಕಾರ್ಯಪ್ರವೃತರಾಗಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಹೇಳಿದರು.

ನಗರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಪಶುಪಾಲನೆ ಹಾಗೂ ಪಶುವೆದ್ಯಕಿಯ ಇಲಾಖೆಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜನರಿಗೆ ಸರ್ಕಾರದಿಂದ ಸಿಗುವ ಯೋಜನೆಗಳ ಮಾಹಿತಿಯ ಕೊರತೆಯಿದ್ದು, ಅಧಿಕಾರಿಗಳು ಅರಿವು ಮೂಡಿಸಬೇಕು. ಅರ್ಹರಿಗೆ ಸರ್ಕಾರಿ ಯೋಜನೆಗಳ ಲ ದೊರಕುವಂತೆ ಮಾಡಬೇಕು ಎಂದರು.

ಮನರೇಗಾ ಯೋಜನೆಯಡಿ ತಾಲೂಕಿನ 33 ಗ್ರಾಮಗಳಲ್ಲಿ 10ಸಾವಿರ ಜಾನುವಾರು ಕೊಟ್ಟಿಗೆ ನಿರ್ಮಾಣ ಮಾಡಲು ಪಶು ವೆದ್ಯಾಧಿಕಾರಿಗಳು ಹಾಗೂ ಗ್ರಾಪಂ ಅಭಿವದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬರ ಮತ್ತು ಪ್ರವಾಹ ಸಂದರ್ಭದಲ್ಲಿ ಜಾನುವಾರುಗಳಿಗೆ ಸೂಕ್ತ ಮೇವಿನ ವ್ಯವಸ್ಥೆ ಮಾಡಿದ ಪಶುಪಾಲನಾ ಇಲಾಖೆಯ ಕಾರ್ಯ ಮಾದರಿಯಾಗಿತ್ತು ಎಂದರು. ತಾಲೂಕಿನ ಗೊಡಚಿನಮಲ್ಕಿ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ಯೋಜನೆಯಡಿ 1ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಆಡು ಸಾಕಣೆ ಟಕದ ಪರಿಶೀಲನೆ ಮಾಡಿದರು. ರೇಬೀಸ್​ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ನಗರದ ತಹಸೀಲ್ದಾರ್​ ಕಾರ್ಯಾಲಯದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಮಾಡಿದರು.
ತಹಸೀಲ್ದಾರ್​ ಡಾ.ಮೋಹನ ಭಸ್ಮೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತಿ, ಪಶುಪಾಲನೆ ಹಾಗು ಪಶುವೆದ್ಯಕಿಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಾಜೀವ ಕೊಲೇರ, ಸಹಾಯಕ ನಿರ್ದೇಶಕ ಡಾ.ಮೋಹನ ಕಮತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net