ಸರ್ಕಾರಿ ಯೋಜನೆಗಳ ಸದುಪಯೋಗ ಮಾಡಿಕೊಳ್ಳಲಿ

21Ainapur1
Published on

ಐನಾಪುರ: ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆ ಜಾರಿ ತಂದಿದೆ. ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಪಪಂ ಸದಸ್ಯ ಪ್ರವೀಣ ಗಾಣಿಗೇರ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿಯ ಎಸ್‌ಎಸ್‌ಎಫ್‌ಸಿ ಯೋಜನೆಯಡಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀಬೀರಲಿಂಗೇಶ್ವರ ದೇವಸ್ಥಾನ ಸುತ್ತಲು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪಟ್ಟಣದಲ್ಲಿ ೨೪x೭ ನಿರಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮೂಲಸೌಕರ್ಯ ಹಾಗೂ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ಪಪಂ ಸದಸ್ಯರಾದ ಅರುಣ ಗಾಣಿಗೇರ, ಸಂಜಯ ಭಿರಡಿ, ಸುರೇಶ ಗಾಣಿಗೇರ, ಸುರೇಶ ಅಡಿಸೇರಿ, ಕುಮಾರ ಜಂತೆನ್ನವರ, ಜಯಕರ, ಸಂಜು ಕುಸನಾಳೆ, ಅನಿಲಕುಮಾರ ಸತ್ತಿ, ರಾಯಪ್ಪ ಹಾಲಾರೊಟ್ಟಿ, ಬಾಳು ಮಡಿವಾಳ, ದೋಂಡಿ ಹರಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net