ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ

25HDK00005
Published on

ಎಚ್.ಡಿ.ಕೋಟೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಬಹುತೇಕ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಣ ಕೊಡಿಸಲು ಹಿಂಜರಿಯುತ್ತಾರೆ. ಆದರೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ಸಿಗುತ್ತಿದೆ ಎಂಬುದನ್ನು ಅರಿಯಬೇಕು. ನಮ್ಮ ಕಾಲೇಜಿನಲ್ಲಿ ಎಷ್ಟೋ ಬಡ ಕುಟುಂಬದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆದು, ಉನ್ನತ ಮಟ್ಟದ ಹುದ್ದೆಗಳಿಗೆ ಸೇರಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಉದ್ಯೋಗ ಮೇಳ ನಡೆಸುವುದು ಬಹಳ ಕಡಿಮೆ. ಆದ್ದರಿಂದ ಕಾಲೇಜಿನಲ್ಲಿ ಈ ಬಾರಿ ಉದ್ಯೋಗ ಮೇಳ ಹಮ್ಮಿಕೊಂಡಿದ್ದೇವೆ ಎಂದರು.

ಉದ್ಯೋಗ ಮೇಳಕ್ಕೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ 150ಕ್ಕೂ ಹೆಚ್ಚು ನಿರುದ್ಯೋಗಿಗಳು ಭಾಗವಹಿಸಿದ್ದರು. 80 ಜನರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಲಭಿಸಿರುವುದು ಸಂತಸ ತಂದಿದೆ ಎಂದರು.

ವಿವಿಧ ಕಂಪನಿಗಳಿಂದ ಆಗಮಿಸಿದ್ದ ಪ್ರಗತಿ ಗೌಡ, ದಿವ್ಯಾ ಆಚಾರ್, ಕವಿತಾ, ಮಾದು, ರಿವೇದ್ ಗೌಡ, ನವೀನ್, ಪೃಥ್ವಿಕ್, ಉಪನ್ಯಾಸಕರಾದ ಕಾತ್ಯಾಯಾನಿ, ಗುರುದತ್ ಕಾಮತ್, ಗಣೇಶ್, ಪುಟ್ಟರಾಜು, ಬಾಲಾಜಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net