ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಗಣನೀಯ ಕುಸಿತ

oppo_2
oppo_2
Published on

ಮದ್ದೂರು: ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರ ಜತೆಗೆ ದಾನಿಗಳು ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ತಿಳಿಸಿದರು. ತಾಲೂಕಿನ ಆಬಲವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ನೀಡಿರುವ ಸಮವಸ್ತ್ರ, ಟೈ, ಬೆಲ್ಟ್, ನೋಟ್‌ಬುಕ್, ಜಾಮಿಟ್ರಿಗಳು ಹಾಗೂ ಪಠ್ಯ ಪರಿಕರಗಳನ್ನು ಬುಧವಾರ ವಿತರಣೆ ಮಾಡಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಎಲ್ಲ ರೀತಿಯ ಸವಲತ್ತುಗಳು ಸಿಗುತ್ತಿದ್ದರೂ ವರ್ಷದಿಂದ ವರ್ಷದಿಂದ ಮಕ್ಕಳ ದಾಖಲಾತಿ ಪ್ರಮಾಣ ಕುಸಿಯುತ್ತಿರುವುದು ಬೇಸರ ಸಂಗತಿ ಎಂದರು.

ಸರ್ಕಾರಿ ಶಾಲೆಯಲ್ಲಿ ಓದಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಮಟ್ಟದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ. ಆದ್ದರಿಂದ ಪಾಲಕರು ಸರ್ಕಾರಿ ಶಾಲೆಗಳು ಎಂಬ ಕೀಳರಿಮೆ ಬಿಟ್ಟು ತಮ್ಮ ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳು ಉಳಿಸಲು ಮುಂದಾಗಬೇಕು ಎಂದರು.

ಸರ್ಕಾರಿ ಶಾಲೆಗಳಿಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳು, ಸಂಘ, ಸಂಸ್ಥೆಗಳು ಹಲವಾರು ರೀತಿಯಲ್ಲಿ ಅನುಕೂಲ ಕಲ್ಪಿಸುತ್ತಿದ್ದು, ಇದರ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಸಮಾಜ ಸೇವಕ ಕೃಷ್ಣೇಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ವಿದ್ಯಾಭ್ಯಾಸ ನೀಡಿದರೆ ಸಮಾಜದಲ್ಲಿ ಅತ್ಯುನ್ನತ ಸಾಧನೆ ಮಾಡಲಿದ್ದಾರೆ ಎಂಬುದಕ್ಕೆ ಹಲವಾರು ನಿರ್ದಶನಗಳಿವೆ ಎಂದರು.

ದಾನಿಗಳಾದ ಕೃಷ್ಣೇಗೌಡ, ಪ್ರಜ್ವಲ್, ತಿಮ್ಮೇಶ್‌ಗೌಡ, ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್, ಮುಖ್ಯ ಶಿಕ್ಷಕ ಕುಮಾರ್, ಸಹ ಶಿಕ್ಷಕರಾದ ಅಕ್ಷತ್, ನಾರಾಯಣಸ್ವಾಮಿ, ಉಮೇಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net