

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಅವರ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಚಟುವಟಿಕೆಯ ಭಾಗವಾಗಿ ತೊಗರಿಹಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನ ಎಮ್ಮೇಖಾನ್, ದೇವರಹಳ್ಳಿ, ಗಾಳಿಪೂಜೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ತೊಗರಿಹಂಕಲ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಪಿ.ದೇವರಾಜ್ ನೇತೃತ್ವದಲ್ಲಿ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ವೈ.ಜೆ.ಸುರೇಶ್, ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಕುರುವಂಗಿ ವೆಂಕಟೇಶ್, ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಪುನೀತ್, ಮುಖಂಡರಾದ ಜಯರಾಜ್, ರವಿ, ಉಮೇಶ್, ಸಂಜೀವ್, ವೋಲರ್ ಮೆನಂಜಸ್ ಮತ್ತಿತರರಿದ್ದರು.