ಸಕಲೇಶಪುರ : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಶಾಸಕ ಸೀಮೆಂಟ್ ಮಂಜು ಹೇಳಿದರು.
ತಾಲೂಕಿನ ದೇವಾಲದಕೆರೆ ಗ್ರಾಮದ ಸರ್ಕಾರಿ ಶಾಲೆ ಸಭಾಭವನ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳು ಇಂದು ವಿದ್ಯಾರ್ಥಿಗಳ ಕೊರತೆಯಿಂದ ಬಾಗಿಲು ಮುಚ್ಚುವ ಹಂತದಲ್ಲಿವೆ. ನಮ್ಮ ಶಾಲೆಗಳು ಉಳಿಯಬೇಕಾದರೆ ನಮ್ಮ ಮಕ್ಕಳನ್ನು ಮೊದಲು ಸರ್ಕಾರಿ ಶಾಲೆಗಳಿಗೆ ಸೇರ್ಪಡೆ ಮಾಡ ಬೇಕು ಎಂದರು.
ನಂತರ ದೇವಾಲದಕೆರೆ ಗ್ರಾಪಂ ವ್ಯಾಪ್ತಿಯ ಬೆಟ್ಟದ ಭೈರವೇಶ್ವರ ದೇವಸ್ಥಾನದ 1.5 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷ ಭರತ್, ಮುಖ್ಯಶಿಕ್ಷಕ ನಾಗರಾಜ್, ಮುಖಂಡರಾದ ಮಂಜುನಾಥ ಇತರರು ಇದ್ದರು.