ಸರ್ಕಾರಿ ಶಾಲೆ ಆವರಣದಲ್ಲೇ ವಿವಿಧ ತರಕಾರಿ ಬೆಳೆ

04.01.2021 SDLP 01
Published on

ಶಿಡ್ಲಟ್ಟ : ಬಿಸಿಯೂಟಕ್ಕೆಂದು ತಮ್ಮಲ್ಲೇ ತರಕಾರಿಗಳನ್ನು ಬೆಳೆದುಕೊಳ್ಳುತ್ತಿದ್ದ ಕೆಲವು ಸರ್ಕಾರಿ ಶಾಲೆಗಳು ತಮ್ಮ ಕೃಷಿ ಕಾಯಕವನ್ನು ಕರೊನಾ ನಡುವೆಯೂ ಮರೆತಿಲ್ಲ.

ಈ ಹಿಂದಿನಿಂದ ಬಗೆ ಬಗೆಯ ತರಕಾರಿಗಳನ್ನು ಶಾಲಾ ಆವರಣದಲ್ಲಿ ಬೆಳೆಸಿ ಅವುಗಳನ್ನು ಶಾಲೆಯ ಬಿಸಿಯೂಟಕ್ಕಾಗಿ ಬಳಸುವ ಮೂಲಕ ತಾಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇತರರಿಗೆ ವಾದರಿಯಾಗಿದ್ದಾರೆ.

ಈ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮಗೆ ಬೇಕಾದ ತರಕಾರಿಗಳನ್ನು ಹಲವು ವರ್ಷಗಳಿಂದ ಬೆಳೆದುಕೊಳ್ಳುತ್ತಿದ್ದಾರೆ. ತೊಗರಿಕಾಯಿ, ಅಲಸಂದಿ, ಕುಂಬಳಕಾಯಿ, ಬಸಲೆಸೊಪ್ಪು, ಅರಿವೆಸೊಪ್ಪು, ನುಗ್ಗೇಕಾಯಿ, ಕರಿಬೇವು, ಅಮೃತಬಳ್ಳಿ, ಬೆಟ್ಟದ ನೆಲ್ಲಿಕಾಯಿ, ಗೊಂಗೂರ ಸೊಪ್ಪು, ಮೆಣಸಿನಕಾಯಿ, ಪುದೀನ, ಕೊತ್ತಂಬರಿ ಮುಂತಾದವುಗಳನ್ನು ಬೆಳೆಯುತ್ತಾ ಬಿಸಿಯೂಟದ ರುಚಿಯನ್ನು ಹೆಚ್ಚಿಸಿಕೊಂಡಿದ್ದರು.

ಸುವಾರು ಒಂದು ವರ್ಷದಿಂದ ಕರೊನಾ ಕಾರಣದಿಂದ ಶಾಲೆಯ ಆವರಣದ ತರಕಾರಿ ತೋಟ ಬಸವಳಿದಿದ್ದರೂ, ಆಹಾರ ಉತ್ಪನ್ನಗಳಿಗೇನೂ ಕೊರತೆಯಾಗಿಲ್ಲ. ಕುಂಬಳಕಾಯಿಗಳು, ಸೋರೇಕಾಯಿ, ಅವರೇಕಾಯಿ ಸಾಕಷ್ಟು ಬಿಟ್ಟಿವೆ.ಎರಡು ಎಕರೆ ವಿಸ್ತೀರ್ಣದ ಶಾಲೆಯ ಆವರಣದಲ್ಲಿ ವಿಷನ್ ಗ್ರೀನ್ ಎಂಬ ಸಂ ಶಾಲೆಯೊಂದಿಗೆ ಸೇರಿ ಕೆಲ ವರ್ಷಗಳ ಹಿಂದೆ ನೇರಳೆ, ಬೇವು, ಮತ್ತಿ, ಸಂಪಿಗೆ, ಹೂವರಸಿ, ಹೊಂಗೆ, ಬೀಟೆ. ಮಹಾಗನಿ, ಬಸವನ ಪಾದ, ವಾವು, ಗಸಗಸೆ, ಅರಳಿ, ಕಾಡು ಬಾದಾಮಿ, ಅತ್ತಿ, ನುಗ್ಗೆ ಮುಂತಾದ ನೂರು ಗಿಡಗಳನ್ನು ನೆಟ್ಟು, ಹನಿ ನೀರಾವರಿ ಪೈಪ್‌ಗಳನ್ನು ಅಳವಡಿಸಿದ್ದರು. ಈಗ ಅವು ಎತ್ತರಕ್ಕೆ ಬೆಳೆದು ನಿಂತು ಶಾಲೆ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net