

ಕುಶಾಲನಗರ: ಕುಶಾಲನಗರ ಸಮೀಪದ ಮುಳ್ಳುಸೋಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ಕಾವಲು ಪಡೆ ವತಿಯಿಂದ ಸೋಮವಾರ ಉಚಿತವಾಗಿ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈ ಜೋಡಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ವಿದ್ಯಾರ್ಥಿಗಳಿಗೆ ದಾನಿಗಳು ಸಹಾಯ ಮಾಡುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಸಿಗುವಂತಾಗಬೇಕು. ಆ ಮೂಲಕ ಉತ್ತಮ ನಾಗರಿಕ ಸಮಾಜ ನಿರ್ಮಾಣ ಮಾಡಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ದಾನಿ ಸೈಜನ್ ಪೀಟರ್ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಮುಖ್ಯಶಿಕ್ಷಕಿ ಭಾಗ್ಯಾ, ಶಿಕ್ಷಕರಾದ ಶಿವಲಿಂಗು, ರಾಗಿಣಿ, ಮೇರಿ, ವಿಜಯ, ವಾಣಿ, ಎಸ್‌ಡಿಎಂಸಿ ಅಧ್ಯಕ್ಷ ಹರೀಶ್, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಗರ್ ಇದ್ದರು.