

ಕುಶಾಲನಗರ: ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಂತೆ ಅಭಿವೃದ್ಧಿ ಹೊಂದಬೇಕೆಂಬುದು ನನ್ನ ಆಶಯ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಲು ಸಿದ್ಧ ಎಂದು ಸಮಾಜ ಸೇವಕ ಹರಪ್ಪಳ್ಳಿ ರವೀಂದ್ರ ಆಶ್ವಾಸನೆ ನೀಡಿದರು.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ರವೀಂದ್ರ ಪುಸ್ತಕಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
ಈ ಬಾರಿ 40 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ವಿವಿಧ ಸರ್ಕಾರಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ. ಶಿಕ್ಷಕರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ ಎಂದರು.
ಶಾಲೆ ಮುಖ್ಯ ಶಿಕ್ಷಕಿ ರೇಣುಕಾ, ಕೂಡಿಗೆ ಶಾಲೆಯ ಮುಖ್ಯ ಶಿಕ್ಷಕ ಯೋಗೇಶ್, ಹರಪಳ್ಳಿ ರವೀಂದ್ರ ಅಭಿಮಾನಿ ಬಳಗದ ಕಾರ್ಯದರ್ಶಿ ಕಾಶೀನಾಥ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್, ಸಿಆರ್‌ಪಿ ಶಾಂತಕುಮಾರ್ ಇತರರಿದ್ದರು.