ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು

25-pnp 1
Published on

ಪಾಂಡವಪುರ: ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ತಾಲೂಕಿನ ಈರೇಗೌಡನಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯಲ್ಲಿ ಪಿಎಬಿ ಅನುಮೋದಿತ ಪೂರ್ವ ಪ್ರಾಥಮಿಕ ವಿಭಾಗ ಇರುವ ಕಾರಣ ಈ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಅಧಿಕವಾಗಿದ್ದು, ಶಾಲೆಗೆ ಹೆಚ್ಚುವರಿ ಕೊಠಡಿಗಳ ಅವಶ್ಯಕತೆ ಇರುವುದನ್ನು ಮನಗಂಡು ಕೊಠಡಿ ನಿರ್ಮಾಣ ಮಾಡಿಕೊಡಲಾಗಿದೆ. ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸುವ ಸಲುವಾಗಿ ಪಂಚಾಯಿತಿಗೊಂದು ಮಾದರಿ ಶಾಲೆ ಅಭಿವೃದ್ಧಿಪಡಿಸಲಾಗುವುದು. ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ಬಿಸಿಯೂಟ ಯೋಜನೆ ಜಾರಿಗೊಳಿಸಲು ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಎಸ್‌ಡಿಎಮ್‌ಸಿ ಅಧ್ಯಕ್ಷೆ ಆನುವಾಳು ರಾಧಾ, ಉಪಾಧ್ಯಕ್ಷ ಹೇಮಂತ್, ಗ್ರಾಪಂ ಸದಸ್ಯೆ ಸರೋಜಮ್ಮ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಂದೀಶ್, ರೈತಸಂಘ ಮುಖಂಡರಾದ ನಟರಾಜು, ಕುಳ್ಳೇಗೌಡ, ಹರೀಶ್‌ಕುಮಾರ್ ಮುಖ್ಯ ಶಿಕ್ಷಕ ಡಿ.ಎಸ್.ವೆಂಕಟೇಶ್ ಶಿಕ್ಷಕರಾದ ಎಲ್.ಕೆ.ಅನಂತಮೂರ್ತಿ, ವಿನೋದ್, ವಿ.ಎಸ್.ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net