ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ

05tnpnewsfilephoto01
ಕೀಳನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಗಿಡ ನೆಟ್ಟು ನೀರೆರೆದರು. ಮಾಲಂಗಿ ಸುರೇಶ್, ಮಲ್ಲೇಶ್ವರಿ, ಅಮಿತ್, ಗೋವಿಂದರಾಜು, ಮಲ್ಲು, ಮಹದೇವಪ್ಪ, ಮಂಜುಳಾ, ಸುವರ್ಣಾ, ತಸ್ಮೀನ್ ಬಾನು, ಪಾಕಿಯಮ್ಮಾಳ್ ಇದ್ದರು.
Published on


*ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಮೆಚ್ಚುಗೆ


ತಿ.ನರಸೀಪುರ: ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಹೇಳಿದರು.

ಸಮೀಪದ ಕೀಳನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಭೇಟಿ ನೀಡಿದ್ದ ಅವರು, ಶಾಲಾ ಆವರಣದಲ್ಲಿ ಗಿಡ ನೆಟ್ಟು ಮಾತನಾಡಿದರು. ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲೂ ಎಲ್ಲ ಸೌಲಭ್ಯಗಳು ದೊರಕುತ್ತಿದೆ. ಜತೆಗೆ ಗುಣಮಟ್ಟದ ಶಿಕ್ಷಣವೂ ದೊರೆಯುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಶ್ಲಾಘಿಸಿದರು.

ಮುಖ್ಯ ಶಿಕ್ಷಕ ಮಾಲಂಗಿ ಸುರೇಶ್ ಮಾತನಾಡಿ, ಸಂಘ ಸಂಸ್ಥೆಗಳ ಮುಖ್ಯಸ್ಥರು, ಸ್ಥಳೀಯರು ಹಾಗೂ ದಾನಿಗಳ ನೆರವು ಪಡೆದು ಶಾಲೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಲಾಗುವುದು. ಆ ಮೂಲಕ ಶಾಲೆಯನ್ನು ಜಿಲ್ಲೆಯಲ್ಲಿ ಮಾದರಿಯನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದರು.

ಇದೇ ವೇಳೆ ಷಡಾಕ್ಷರಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಾಲೆಯಲ್ಲಿನ ಶಿಕ್ಷಣದ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಶ್ವರಿ, ಡಯಟ್ ಉಪನ್ಯಾಸಕ ಅಮಿತ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು , ಎಸ್‌ಡಿಎಂಸಿ ಅಧ್ಯಕ್ಷ ಮಲ್ಲು, ಮುಖಂಡ ಮಹದೇವಪ್ಪ, ಶಿಕ್ಷಕರಾದ ಮಂಜುಳಾ, ಸುವರ್ಣಾ, ತಸ್ಮೀನ್ ಬಾನು ,ಪಾಕಿಯಮ್ಮಾಳ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net