ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮೂಲಸೌಕರ್ಯ

30ark-2
Published on

ಅರಕಲಗೂಡು: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಎ. ಮಂಜು ಹೇಳಿದರು.


ತಾಲೂಕಿನ ಕೊಣನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 21.20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎರಡು ಹೆಚ್ಚುವರಿ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ವೃದ್ಧಿಸಲು ಶಿಕ್ಷಕರು ನೀಡುವಷ್ಟೆ ಒತ್ತನ್ನು ಪಾಲಕರು ವಹಿಸಿದಾಗ ಮಾತ್ರ ಉತ್ತಮ ಶಿಕ್ಷಣ ಗಳಿಸಲು ಸಾಧ್ಯವಿದೆ ಎಂದು ಕಿವಿಮಾತು ಹೇಳಿದರು.


ಬಿಇಒ ದೇವರಾಜು, ಗ್ರಾಪಂ ಅಧ್ಯಕ್ಷೆ ಮಿಜ್ಬಾ ರಿಜ್ವಾನ್, ಉಪಾಧ್ಯಕ್ಷೆ ಜಯಮ್ಮ, ಮುಖಂಡರಾದ ಚೌಡೇಗೌಡ, ಇಮ್ರಾನ್, ಶ್ರೀನಿವಾಸ್, ವಾಸುದೇವ್, ಶಿವಣ್ಣ ಇತರರಿದ್ದರು.


ವಿವಿಧೆಡೆ ಉದ್ಘಾಟನೆ: ತಾಲೂಕಿನ ಕಣಿಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುತ್ತಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಣ್ಣೂರು ಕೊಂಗಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹೊನ್ನವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಲಾ 13.90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೆಚ್ವುವರಿ ಕೊಠಡಿಗಳನ್ನು ಶಾಸಕ ಎ. ಮಂಜು ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net