

ಚಿಕ್ಕಮಗಳೂರು: ಕೊಟ್ಟಿಗಟ್ಟಲೇ ಆಸ್ತಿ, ಅಂತಸ್ತು ಕೂಡಿಟ್ಟರೆ ಮನಸ್ಸಿಗೆ ನೆಮ್ಮದಿ ದೊರೆಯುವುದಿಲ್ಲ. ಅಸಹಾಯಕರು, ಬಡವರ್ಗದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಟ್ಟರೆ ಬದುಕಿನಲ್ಲಿ ಸಂತೋಷ ತುಂಬಲಿದೆ ಎಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಗುರುಮೂರ್ತಿ ತಿಳಿಸಿದರು.
ನಗರದ ಕೋಟೆ ಸಮೀಪದ ಸರ್ಕಾರಿ ನಗರ ಬಾಲಕರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಘಟಕದಿಂದ ಉಚಿತ ನೋಟ್‌ಪುಸ್ತಕ, ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ಮಕ್ಕಳಿಗೆ ದಾನದ ರೂಪದಲ್ಲಿ ನೋಟ್‌ಪುಸ್ತಕ ವಿತರಿಸುತ್ತಿಲ್ಲ. ಬದಲಾಗಿ ಭವಿಷ್ಯದಲ್ಲಿ ವಿದ್ಯಾವಂತರಾಗಿ ಸಮಾಜದಲ್ಲಿ ದೊಡ್ಡವ್ಯಕ್ತಿಗಳಾಗಿ ರೂಪುಗೊಳ್ಳಲಿ ಎಂಬ ಉz್ದೆÃಶದಿಂದ ಈ ಸಾಮಾಜಿಕ ಕಾರ್ಯಕ್ಕೆ ಮುಂದಾಗಿz್ದÉÃವೆ. ಹೀಗಾಗಿ ಶಾಲಾಮಕ್ಕಳು ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಭವಿಷ್ಯದಲ್ಲಿ ನೀವು ಅಸಹಾಯಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಯಾವುದೇ ಮನುಷ್ಯ ಕೋಟಿಗಟ್ಟಲೇ ಆಸ್ತಿಗಳಿದ್ದರೂ ಕೊನೆಗಳಿಗೆಯಲ್ಲಿ ಎಲ್ಲವನ್ನೂ ತ್ಯಜಿಸಿ ಮಣ್ಣಾಗಲೇಬೇಕಿದೆ. ನೈಜವಾಗಿ ಸಕಲ ಐಶ್ವರ್ಯವಿರುವನು ಶ್ರೀಮಂತನಲ್ಲ. ಬಡವರಿಗೆ, ನೊಂದವರಿಗೆ ಸಹಾಯ ಹಸ್ತ ಚಾಚುವವನೇ ನಿಜವಾದ ಶ್ರೀಮಂತ. ಮನುಷ್ಯ ದುಡಿಮೆಯ ಒಂದಿಷ್ಟು ಹಣವನ್ನು ಸಮಾಜಕ್ಕಾಗಿ ಬಳಸಿದರೆ ಬದುಕು ಸಾರ್ಥಕವಾಗಲಿದೆ ಎಂದು ಹೇಳಿದರು.
ವಿದ್ಯೆಯಿಂದ ಮಾತ್ರ ಕಳೆದುಕೊಂಡಿದ್ದನ್ನು ಮರಳಿ ಪಡೆಯಲು ಸಾಧ್ಯ. ಆದ್ದರಿಂದ ಸಮಾಜದ ಮಕ್ಕ ಳು ಉನ್ನತ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ಪಾಲಕರು ಕೂಡಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸಬೇಕು. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಅನಾನುಕೂಲ ಇದ್ದಲ್ಲಿ ಅದನ್ನು ಸರಿಪಡಿಸಲು ಕರವೇ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರವೇ ಗೌರವಾಧ್ಯಕ್ಷ ಮಂಜುನಾಥ್, ಮುಖಂಡರಾದ ಅನಿಲ್, ಕಿರಣ್, ಹರ್ಷಿತ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.