

ಕೆ.ಆರ್.ಸಾಗರ: ಶಿಕ್ಷಕರ ದಿನಾಚರಣೆ ಅಂಗವಾಗಿ ಮಂಗಳವಾರ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಎಸ್‌ಕ್ಯೂ) ಮಕ್ಕಳು ನೃತ್ಯ ಪ್ರದರ್ಶಿಸುವ ಮೂಲಕ ಶಿಕ್ಷಕರಿಗೆ ಶುಭಾಶಯ ಕೋರಿದರು.
ಡಾ.ಎಸ್.ರಾಧಾಕೃಷ್ಣ ಅವರ ಭಾವಚಿತ್ರವನ್ನು ವಿಶೇಷವಾಗಿ ಹೂಗಳಿಂದ ಅಲಂಕರಿಸಲಾಗಿತ್ತು. ಇದೇ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪೂಜೆ ಸಲ್ಲಿಸಿದರು. ನಂತರ 8ನೇ ತರಗತಿ ವಿದ್ಯಾರ್ಥಿಗಳಾದ ಮೋನಿಕಾ ಮತ್ತು ಮಹಿಮಾ ಶಿಕ್ಷಕರ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು.
ನಂತರ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ನೀಡಿದರು. ಪ್ರಭಾರ ಮುಖ್ಯ ಶಿಕ್ಷಕ ಮಹೇಶ್ ಇತರರು ಉಪಸ್ಥಿತರಿದ್ದರು.