ಸರ್ಕಾರಿ ಶಾಲೆಯಲ್ಲೇ ಶಿಕ್ಷಣ ಕೊಡಿಸಿ ಶೈಕ್ಷಣಿಕ ಕ್ರಾಂತಿಗೆ ಮುಂದಾಗಿ

31NGD1
ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪಿಎಸ್‌ಐ ಮಹೇಂದ್ರ ಉದ್ಘಾಟಿಸಿದರು. ಸಿದ್ದರಾಜು, ರಘು, ನಜೀಬುಲ ಖಾನ್ ಉಪಸ್ಥಿತರಿದ್ದರು.
Published on

ನಂಜನಗೂಡು: ಸರ್ಕಾರಿ ಶಾಲೆಯ ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲೇ ಶಿಕ್ಷಣ ಕೊಡಿಸುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಮುಂದಾಗಬೇಕಿದೆ ಎಂದು ದೊಡ್ಡಕವಲಂದೆ ಪೊಲೀಸ್ ಠಾಣೆ ಪಿಎಸ್‌ಐ ಮಹೇಂದ್ರ ಅಭಿಪ್ರಾಯಪಟ್ಟರು.

ತಾಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಶನಿವಾರ ನಡೆದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಾರ್ಷಿಕೋತ್ಸವ ವಿದ್ಯಾರ್ಥಿ ಜೀವನದಲ್ಲಿ ಹಬ್ಬದ ವಾತಾವರಣ ಉಂಟು ಮಾಡುವ ಕಾರ್ಯಕ್ರಮವಾಗಿರುತ್ತದೆ. ವಿದ್ಯಾರ್ಥಿಗಳು ಚರ್ಚಾ ಸ್ಪರ್ಧೆ, ಕ್ರೀಡೆ, ಕವನ ಮುಂತಾದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆಯುವ ಸಂಭ್ರಮದಲ್ಲಿರುತ್ತಾರೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ವ್ಯಕ್ತಪಡಿಸಿ ಸಾರ್ವಜನಿಕವಾಗಿ ಸಂಭ್ರಮಿಸುವ ದಿನವನ್ನೇ ನಾವು ವಾರ್ಷಿಕೋತ್ಸವ ದಿನಾಚರಣೆ ಎಂಬುದಾಗಿ ಆಚರಣೆ ಮಾಡಿಕೊಳ್ಳುತ್ತಿದ್ದೇವೆ. ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾದವರ ಮಕ್ಕಳು ಕಾನ್ವೆಂಟ್‌ನಲ್ಲಿ ವ್ಯಾಸಂಗ ಮಾಡುತ್ತಿರುತ್ತಾರೆ. ಇದು ಇಂದಿನ ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

ನಮಗೆ ಮೂಲ ಭೂತ ಸೌಕರ್ಯಗಳು ಇರಲಿಲ್ಲ. ಕಷ್ಟಪಟ್ಟು ಉತ್ತಮ ಸ್ಥಾನದಲ್ಲಿದ್ದೇವೆ. ಈಗ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ನೀಡಿದೆ. ತಾವು ಉನ್ನತ ಮಟ್ಟದಲ್ಲಿ ವ್ಯಾಸಂಗ ಮಾಡಿ ಇದೇ ಶಾಲೆಗೆ ಮುಖ್ಯ ಅತಿಥಿಗಳಾಗಿ ಬರಬೇಕು. ಸಮಾಜದಲ್ಲಿ ಉನ್ನತ ಮಟ್ಟದ ಭವಿ?್ಯವನ್ನು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.

ಇನ್ನೂ ಶಾಲೆಯಲ್ಲಿ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರನಾಯಕ, ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು, ಉಪ ಪ್ರಾಂಶುಪಾಲ ರಘು, ಎಸ್‌ಡಿಎಂಸಿ ಅಧ್ಯಕ್ಷ ನಜೀಬುಲ ಖಾನ್, ಶಿಕ್ಷಕರಾದ ಅರ್ಚನಾ, ಮಧುಶ್ರೀ, ಕೆಂಪಣ್ಣ, ರವಿಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net