ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

15 ckm 11 r.dharmasena
ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನಾ
Published on

ಚಿಕ್ಕಮಗಳೂರು: ಸರ್ಕಾರಿ ಸೌಲಭ್ಯಗಳನ್ನು ಪರಿಶಿಷ್ಟ ಜಾತಿ ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನಾ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಚಿತ್ರದುರ್ಗದಲ್ಲಿ ನಡೆದ ಸಮಾವೇಶದಲ್ಲಿ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಅಭಿವೃದ್ಧಿ ಹಾಗೂ ಸರ್ಕಾರಿ ಯೋಜನೆಗಳು ತಲುಪುತ್ತಿವೆಯೆ, ಸ್ಥಳೀಯ ಶಾಸಕರು, ಸಂಸದರು ಸಮಸ್ಯೆಗಳಿಗೆ ಸ್ಪಂಧಿಸುತ್ತಿದ್ದಾರೆಯೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಎಐಸಿಸಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವ ಕುಮಾರ್ ಅವರ ಸೂಚನೆಯಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.

ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ನಡೆಸಿದ್ದು, ನಿಗಮ ಮಂಡಳಿ ನೇಮಕ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನ ಸೇರಿದಂತೆ ಇತರೆ ಹುದ್ದೆಗಳನ್ನು ಪರಿಶಿಷ್ಟರಿಗೆ ನೀಡಬೇಕು ಎಂದು ಮನವಿ ಮಾಡಿದರು.

ಜತೆಗೆ ಕೆಲವೊಂದು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಇದನ್ನು ಪರಿಶಿಷ್ಟ ಜಾತಿ ವಿಭಾಗದ ರಾಷ್ಟಿçÃಯ ಅಧ್ಯಕ್ಷರ ಗಮನಕ್ಕೆ ಹಾಗೂ ಸರ್ಕಾರದ ಗಮನಕ್ಕೆ ತರುತ್ತದೆ. ಪದಾಧಿಕಾರಿಗಳು ಗೂಗಲ್ ಮೇಬರ್‌ಶೀಫ್ ಮಾಡಲು ಗಮನಹರಿಸಬೇಕು ಎಂದರು.

ಸುಪ್ರೀAಕೋರ್ಟ್ ನ್ಯಾಯಾಧೀಶರ ಮೇಲೆ ವಕೀಲ ಶೂ ಎಸೆದಿರುವ ಪ್ರಕರಣವನ್ನು ಖಂಡಿಸಿದ ಅವರು, ನ್ಯಾಯಾಧೀಶರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕರಾದ ರಾಹುಲ್ ಗಾಂಧಿ ಅವರು ಮತಕಳ್ಳತನ ಆರೋಪ ಮಾಡಿದ್ದು, ಕೇಂದ್ರ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ, ಮಲ್ಲೇಶ ಸ್ವಾಮಿ, ಪ್ರಮುಖರಾದ ಎಚ್.ಪಿ.ಮಂಜೇಗೌಡ, ಎಂ.ಎಸ್.ಅನAತ್, ಶಾಂತಕುಮಾರ್, ನೇತ್ರಾವತಿ, ಹಿರೇಮಗಳೂರು ರಾಮಚಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net