

ಚಿಂಚೋಳಿ: ದೇಶಕ್ಕೆ ಸ್ವಾತಂತ್ರ್ಯ ದೊರೆತ ಒಂದು ವರ್ಷದ ನಂತರ ಕಲ್ಯಾಣ ಕರ್ನಾಟಕ ನಿಜಾಮನ ಕಪಿಮುಷ್ಟಿಯಿಂದ ವಿಮೋಚನವಾಯಿತು. ಅಂದಿನ ಕೇಂದ್ರ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಕೊಡುಗೆ ಅವಿಸ್ಮರಣೀಯ ಎಂದು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸೋಣ ಅಭಿವೃದ್ಧಿಗೆ ಶ್ರಮಿಸೋಣ ಎಂದರು.
ಶಿಲ್ಪಿ ವಿಶ್ವಕರ್ಮ ವಿಶ್ವಕ್ಕೆ ಅಪಾರ ಕೊಡುಗೆ ನೀಡಿದ ಕೊಡುಗೈ ದಾನಿ ಯಾಗಿದ್ದಾರೆ. ಅನೇಕ ದೇವಾಲಯಗಳನ್ನು ನಿರ್ಮಿಸಿ ಆಧ್ಯಾತ್ಮಿಕ ಬೀಡಾಗಿಸಲು ವಿಶ್ವಕರ್ಮ ಸಮಾಜದ ಕೊಡುಗೆ ಅನನ್ಯ ಎಂದು ಮಾತನಾಡಿದರು.
ಈ ವೇಳೆ ತಾ.ಪಂ ಇಓ ಶಂಕರ್ ರಾಠೋಡ, ಸಹಾಯಕ ಕೃಷಿ ನಿರ್ದೇಶಕ ವೀರಶೇಟ್ಟಿ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ್ ಧನ್ನಿ, ನಾಗಶೇಟ್ಟಿ ಭದ್ರಶೇಟ್ಟಿ, ಗುರು ಪ್ರಸಾದ್ ಕವಿತಾಳ, ಅಶೋಕ್ ಹೂವಿನ ಬಾಯಿ, ಸುರೇಶ್ ದೇಶಪಾಂಡೆ, ವೆಂಕಟೇಶ ದುಗ್ಗನ್, ರವಿಕುಮಾರ ಚಿಟ್ಟಾ, ಜಗದೀಶ್ ಚಂದ್ರ ನಮಲೀಕರ್, ಮಲ್ಲಿಕಾರ್ಜುನ ವಿಶ್ವಕರ್ಮ, ಶ್ರೀಕಾಂತ್ ಜಾನಕಿ, ವಿಠಲ ಕುಸಾಳೆ ಸೇರಿದಂತೆ ಅನೇಕರು ಇದ್ದರು.