

ಮದ್ದೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿನುತಾ ಕೆ.ಎಂ.ಉದಯ್ ವಿಶ್ವಾಸವ್ಯಕ್ತಪಡಿಸಿದರು.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ತಮ್ಮ ಪತಿ, ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಉದಯ್ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಸರ್ವ ಜನಾಂಗದ ಒಳಿತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಕೂಲ ಕಲ್ಪಿಸಲಿದೆ ಎಂದರು.
ಕೆ.ಎಂ.ಉದಯ್ ಅವರು ತಾಲೂಕಿನಲ್ಲಿ ಕಳೆದ 3 ವರ್ಷಗಳಿಂದ ಕೆ.ಎಂ.ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಹಲವಾರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸಿದ್ದಾರೆ. ಉದಯ್ ಅವರಿಗೆ ಅಧಿಕಾರ ಸಿಕ್ಕರೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗುತ್ತದೆ. ಆದ್ದರಿಂದ ನಿಮ್ಮ ಸೇವೆ ಮಾಡಲು ಉದಯ್ ಅವರಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಮುಖಂಡರಾದ ಎಂ.ಡಿ.ಮಹಾಲಿಂಗಯ್ಯ, ಮಂಜುಳಾ ಮೃತ್ಯುಂಜಯ, ಅಭಿ ಇತರರು ಇದ್ದರು.