

ನಾಪೋಕ್ಲು: ಕ್ರೀಡೆ ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ. ಬೆಳೆಯುವ ಪ್ರತಿಭೆಗಳಿಗೆ ಬೇಸಿಗೆ ಶಿಬಿರಗಳು ವೇದಿಕೆಯಾಗಿವೆ ಎಂದು ಕೆಂಬಡತಂಡ ಸಿಮ್ಸ್ ಮಂದಣ್ಣ ಅಭಿಪ್ರಾಯಪಟ್ಟರು.
ಮೂರ್ನಾಡು ವಿದ್ಯಾಸಂಸ್ಥೆಯ ಜನರಲ್ ಕೆ.ಎಸ್.ತಿಮ್ಮಯ್ಯ ಅಕಾಡೆಮಿ ಫಾರ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ವತಿಯಿಂದ ಆಯೋಜಿಸಿದ್ದ 12ನೇ ವರ್ಷದ ಹಾಕಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಬಿರಾರ್ಥಿಗಳು ಶಿಬಿರ ಮುಗಿದ ನಂತರವೂ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. 74 ಶಿಬಿರಾರ್ಥಿಗಳಿಗೆ ಉತ್ತಮ ತರಬೇತಿ ನೀಡಲಾಗಿದೆ ಎಂದರು. ಗಣ್ಯರು ಶಿಬಿರಾರ್ಥಿಗಳಿಗೆ ಅರ್ಹತಾ ಪತ್ರಗಳನ್ನು ನೀಡಿ ಶುಭ ಹಾರೈಸಿದರು.