ಸರ್ವೇ ಸೆಟ್ಲ್‌ಮೆಂಟ್‌ಗೆ ಜಂಟಿ ಸರ್ವೇ ನಡೆಸಲಿ

4-SanduruP2
????????????
Published on

ಸಂಡೂರು: ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಅರಣ್ಯ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಗುರುತಿಸಬೇಕು. ಅಲ್ಲಿವರೆಗೆ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿರುವ ರೈತರಿಗೆ ನೀಡಿರುವ ನೋಟಿಸ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾದಿಂದ ತಾಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ಪ್ರತಿಭಟನೆ ನಡೆಸಲಾಯಿತು.

ಸಂಘದ ಅಧ್ಯಕ್ಷ ಗಿರಿರಾವ್ ಮಾತನಾಡಿ, ತಾಲೂಕಿನಲ್ಲಿ ಕಂದಾಯ ಮತ್ತು ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಸಂಡೂರು ರಾಜರ ಕಾಲದಿಂದ ಸರ್ವೇ ಸೆಟ್ಲ್‌ಮೆಂಟ್ ಆಗಿರದ ಕಾರಣಕ್ಕೆ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ದೂರಿದರು.

ಸರ್ಕಾರ ಅರಣ್ಯ ಹಕ್ಕು ಕಾಯ್ದೆಗಳನ್ನು ಸಡಿಲಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ಗ್ರಾಮಗಳ ಸರ್ವೇ ಸೆಟ್ಲ್‌ಮೆಂಟ್ ಮಾಡಿ ರೈತರಿಗೆ ಪಟ್ಟಾ ನೀಡಬೇಕು. ಕಂದಾಯ ಹಾಗೂ ಅರಣ್ಯ ಇಲಾಖೆ ಸೇರಿ ಜಂಟಿ ಸರ್ವೇ ಮಾಡಲು ಮೋಜಣಿ ಹಾಗೂ ಅರಣ್ಯ ಇಲಾಖೆಗೆ ಸೂಚಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net