

ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಹತ್ತಿಮತ್ತೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮಂಜುನಾಥ ವೀರಭದ್ರಪ್ಪ ಕೋಳಿವಾಡ (45) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಮಳೆ ಸರಿಯಾಗಿ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.