ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮ

Voluntary Blood Donation Day Programme
Published on

ಮಡಿಕೇರಿ:

ವಿವಿಧ ಸಂಘನೆಗಳ ಆಶ್ರಯದಲ್ಲಿ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮಂಗಳವಾರ ಇಲ್ಲಿನ ರೋಟರಿ ಹಾಲ್‌ನಲ್ಲಿ ನಡೆಯಿತು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್. ಆನಂದ್ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ಜಿಲ್ಲೆಯಲ್ಲಿ ರಕ್ತದ ಅಗತ್ಯ ತುಂಬಾ ಇದೆ. ಎಲ್ಲಾ ಸಂಘ ಸಂಸ್ಥೆಗಳ ಸಹಕಾರದಿಂದ ಹೆಚ್ಚು ರಕ್ತದಾನ ಶಿಬಿರಗಳು ಆಯೋಜನೆಯಾಗುತ್ತದೆ. ಎಲ್ಲರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.

ಮಡಿಕೇರಿ ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲಾ ದಾನಕ್ಕಿಂತ ರಕ್ತದಾನ ಶ್ರೇಷ್ಠ ದಾನ. ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದರು. ಕೊಡಗು ಶಾಖೆ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ ತುರ್ತು ಸಂದರ್ಭದಲ್ಲಿ ರಕ್ತದ ಅಗತ್ಯ ತುಂಬಾ ಇದೆ. ರಕ್ತದಾನ ಜೀವದಾನ, ಯುವಜನತೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು. ಪ್ರತಿಯೊಬ್ಬರೂ ಸದೃಢರಾಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ ಯುವಜನತೆ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರಲ್ಲದೆ ರಕ್ತದ ಅವಶ್ಯಕತೆ ಮತ್ತು ಬೇಡಿಕೆಯ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಂದು ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ಹಾಗೂ 4 ರಕ್ತಶೇೆಖರಣಾ ಘಟಕಗಳು ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಹಾಗೂ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೆ.ಪಿ.ಕುಟ್ಟಪ್ಪ, ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮುರಳಿಧರ್, ಮಡಿಕೇರಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಕಮಲಾ, ಸುನೀತಾ ಮುತ್ತಣ್ಣ ಇತರರು ಇದ್ದರು.

ಜಿಲ್ಲೆಯಲ್ಲಿ ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳಾದ ಚಂಗಪ್ಪ ಸಿ.ಸಿ. (21 ಬಾರಿ ರಕ್ತದಾನ) ಮತ್ತು ಸುಮಿತಾ (12 ಬಾರಿ ರಕ್ತದಾನ) ಇವರನ್ನು ಸನ್ಮಾನಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಒಟ್ಟು 25 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಮಡಿಕೇರಿ ಮಾಜಿ ಸೈನಿಕರ ಸಂಘದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net