ಸವಲತ್ತು ಸದುಪಯೋಗವಾದರೆ ಪ್ರಗತಿ

13 GBD 2
Published on

ಗೌರಿಬಿದನೂರು: ಸರ್ಕಾರದ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ದೊರೆತು ಸದುಪಯೋಗವಾದರೆ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿ ಹಂಪಸಂದ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿಬೇಕೆಂದು ಸೂಚಿಸಿದರು.

ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಈ ನಿಟ್ಟಿನಲ್ಲಿ ಅನುದಾನಕ್ಕೆ ಬೇಡಿಕೆ ಇಡಲಾಗಿದೆ. ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಿಸಿದರು.

ಅಭಿವೃದ್ಧಿ ಕೇವಲ ಮಾತಾಗಬಾರದು ಅದನ್ನು ಕಾರ್ಯರೂಪಕ್ಕೆ ತರಬೇಕು ಎಂಬ ಆಶಯದೊಂದಿಗೆ ಎಲ್ಲರೂ ಕೆಲಸ ಮಾಡಬೇಕು, ಶಾಸಕರ ದೂರದೃಷ್ಟಿಯಿಂದ ತಾಲೂಕಿನಲ್ಲಿ ಕೈಗಾರಿಕೆಗಳು ತಲೆಯೆತ್ತಿದೆ, ಶಿಕ್ಷಣ ಕ್ರಾಂತಿಯಾಗುತ್ತಿದೆ

ಎಂದು ತಾಪಂ ಮಾಜಿ ಉಪಾಧ್ಯಕ್ಷ ಎಚ್.ಎನ್.ಪ್ರಕಾಶ್ ರೆಡ್ಡಿ ಬಣ್ಣಿಸಿದರು.

ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ವಕೀಲ ವೇಣುಗೋಪಾಲ್, ಮುಖಂಡರಾದ ಎಚ್.ಶಶಿಧರ್‌ಗೌಡ, ಮೂರ್ತಿ, ಎಸ್.ಅಶ್ವತ್ಥಪ್ಪ, ರಾಜಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net