ಸವಲತ್ತುಗಳ ಸದುಪಯೋಗ ಪಡೆಯಿರಿ

09rajesh4
Published on

ಚಾಮರಾಜನಗರ: ಮೀನುಗಾರರು ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಬಳಸಿ ತಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಬೇಕು ಎಂದು ಎಂಎಸ್‌ಐಎಲ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮೀನುಗಾರಿಕೆ ಇಲಾಖೆ ವತಿಯಿಂದ ಮಂಜೂರಾಗಿದ್ದ ರಾಜ್ಯ ವಲಯದ 15, ಜಿಲ್ಲಾ ವಲಯದ 10 ಸೇರಿ ಎಸ್ಸಿಎಸ್ಪಿ, ಟಿಎಸ್‌ಪಿ ಯೋಜನೆಯ 25 ಜನ ಫಲಾನುಭವಿಗಳಿಗೆ ಮೀನುಗಾರಿಕೆ ಪರಿಕರಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿರುವ ಮೀನುಗಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಲಾಖೆಯಿಂದ ವಿವಿಧ ರೀತಿಯ ಕಿಟ್‌ಗಳು, ಮೀನು ಹಿಡಿಯುವ ಬಲೆಗಳು, ಕ್ರೇಟುಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಮೀನುಗಾರರಿಗೆ ವಾಸಿಸಲು ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮೀನುಗಾರರು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ಅವರಿಗೆ ಗುಣಮಟ್ಟದ ವಿದ್ಯಾಭ್ಯಾಸ ಕೊಡಿಸಬೇಕು ಎಂದರು.

ಈ ವೇಳೆ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಜೆ.ಎಂ.ಪ್ರಶಾಂತ್, ಸಹಾಯಕ ಶ್ರೀನಿವಾಸ್, ಮೀನುಗಾರರ ಸಹಕಾರಸಂಘದ ಸದಸ್ಯರು ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net