ಸವಾಲು ಎದುರಿಸಲು ಪೂರಕ ತಯಾರಿ ಬೇಕು

PH 10
Published on

ಸೇಡಂ: ಜಗತ್ತು ಇಂದು ಸ್ಪರ್ಧಾತ್ಮಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಬರುವ ಸವಾಲುಗಳನ್ನು ಎದುರಿಸಿ, ಗೆಲ್ಲಬೇಕಾದರೆ ಪೂರಕ ತಯಾರಿ ಅಗತ್ಯ ಎಂದು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಹಕಾರ್ಯದರ್ಶಿ ಡಾ.ಸದಾನಂದ ಬೂದಿ ಹೇಳಿದರು.

ನೃಪತುಂಗ ಪದವಿ ಮಹಾವಿದ್ಯಾಲಯ ಹಾಗೂ ಎಂಕಾA ಸ್ನಾತಕೋತ್ತರ ಕೇಂದ್ರದಲ್ಲಿ ಗುರುವಾರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿನ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆ ಆರಂಭದಿAದಲೂ ಓದಿನೊಂದಿಗೆ ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತುವ ಕೆಲಸ ಮಾಡುತ್ತಿದೆ. ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಸಾಧಕರ ಸಾಲಿನಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಸಂಸ್ಥೆಯ ಸಂಕಲ್ಪವಾಗಿದೆ ಎಂದರು.

ಪ್ರಾಚಾರ್ಯ ಪ್ರೊ.ಶಾಮಸುಂದರ ಕಲಾಲ್ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರದ ಟಾರ್ಗೆಟ್ ಕೋಚಿಂಗ್ ಸಂಸ್ಥೆಯ ಸಿದ್ದಾರ್ಥ ಸಾಹುಕಾರ ತರಬೇತಿ ನೀಡಿದರು. ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ರೇವಣಸಿದ್ದಯ್ಯ ಮಠ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮೇರಿ ಲೇಹಾ ನಿರೂಪಣೆ ಮಾಡಿದರು. ಅಪರ್ಣಾ ಕಡಬಗಾಂವ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net