ಸವಾಲುಗಳನ್ನು ಮೆಟ್ಟಿ ಮುನ್ನಡೆಯಿರಿ

Overcome challenges
ವಿಜಯಪುರದ ಎಸ್‌ಬಿ ಆರ್ಟ್ಸ್ ಮತ್ತು ಕೆಸಿಪಿ ಸೈನ್ಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಡಾ. ಯು.ಎಸ್. ಪೂಜೇರಿ, ಡಾ. ಆರ್.ಎಂ. ಮಿರ್ದೆ, ಪ್ರೊ. ಎ.ಬಿ. ಪಾಟೀಲ ಮತ್ತಿತರರಿದ್ದಾರೆ.
Published on

ವಿಜಯಪುರ: ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಡೆಯಬೇಕು ಎಂದು ನಿವೃತ್ತ ಪ್ರಾಚಾರ್ಯ ಡಾ. ಯು.ಎಸ್. ಪೂಜೇರಿ ಹೇಳಿದರು.

ನಗರದ ಬಿಎಲ್ಡಿಇ ಸಂಸ್ಥೆಯ ಎಸ್.ಬಿ. ಆರ್ಟ್ಸ್ ಮತ್ತು ಕೆಸಿಪಿ ಸೈನ್ಸ್ ಕಾಲೇಜಿನಲ್ಲಿ ಮಂಗಳವಾರ ನಡೆದ 2022-23ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮನುಷ್ಯನಿಗೆ ಜನ್ಮದಿಂದಲೇ ಹಲವಾರು ಸವಾಲುಗಳು, ಕಷ್ಟಗಳು ಎದುರಾಗುತ್ತವೆ. ಅವುಗಳನ್ನು ನಿರ್ಭೀತಿಯಿಂದ ಎದುರಿಸಬೇಕು. ವಿದ್ಯಾರ್ಥಿ ಜೀವನದ ಪ್ರತಿಯೊಂದು ಕ್ಷಣವನ್ನು ಸಂತಸದಿಂದ ಕಳೆಯಬೇಕು. ವಿದ್ಯಾಭ್ಯಾಸದ ಜೊತೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿಯೂ ಪಾಲ್ಗೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ನಮ್ಮ ದೇಶದ ಸಂಸ್ಕೃತಿಯನ್ನು ಗೌರವಿಸಿ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜಕ್ಕೆ ನಮ್ಮದೇ ಆದ ಕೊಡುಗೆ ನೀಡಬೇಕು. ಪರಿಸರ ಸಂರಕ್ಷಣೆ, ಹಿರಿಯರಿಗೆ ಗೌರವ ನೀಡುವ ಮೂಲಕ ಉತ್ತಮ ನಾಗರಿಕರಾಗಿ ಹೊರ ಹೊಮ್ಮಬೇಕು ಎಂದು ಅವರು ಹೇಳಿದರು.

ಪ್ರಾಚಾರ್ಯ ಡಾ. ಆರ್.ಎಂ. ಮಿರ್ದೆ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಗಮನ ಹರಿಸದೇ ಮೌಲ್ಯಯುತ ಶಿಕ್ಷಣ, ಸ್ಪರ್ಧಾತ್ಮಕತೆ ಕಡೆಗೂ ಉತ್ಸುಕತೆ ತೋರಿಸಬೇಕು. ನಿರ್ದಿಷ್ಟ ಗುರಿಯ ಜೊತೆಗೆ ಸತತ ಪರಿಶ್ರಮ ವಹಿಸಿ ಜೀವನದಲ್ಲಿ ಉತ್ತಮ ಸಾಧನೆೆ ಮಾಡಬೇಕು ಎಂದು ಹೇಳಿದರು.
ಉಪಪ್ರಾಚಾರ್ಯ ಎ.ಬಿ. ಪಾಟೀಲ, ಐಕ್ಯೂಎಸಿ ಸಂಯೋಜಕ ಡಾ. ಪಿ.ಎಸ್. ಪಾಟೀಲ, ದೈಹಿಕ ನಿರ್ದೇಶಕ ಎಸ್. ಕೆ. ಪಾಟೀಲ, ವಿದ್ಯಾರ್ಥಿ ಪ್ರತಿನಿಧಿಗಳಾದ ವಾದಿರಾಜ ಮತ್ತು ರಶ್ಮಿ ಮತ್ತಿತರರಿದ್ದರು.

ಪ್ರೊ. ಶ್ರೀದೇವಿ ಬೈರೊಡಗಿ ನಿರೂಪಿಸಿದರು. ಪ್ರೊ.ಆರ್.ಡಿ. ಜೋಷಿ ಸ್ವಾಗತಿಸಿದರು. ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷೆ ಡಾ. ಉಷಾದೇವಿ ಹಿರೇಮಠ ಹಾಗೂ ಡಾ. ಸ್ವಾತಿ ಪಾಟೀಲ ವರದಿ ವಾಚಿಸಿದರು. ಪ್ರೊ. ಎಸ್.ಎಚ್. ಹೂಗಾರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net