ಸವಿತಾ ಮಹರ್ಷಿ ಜಯಂತಿ 16ಕ್ಕೆ

CTD 30 ADC B.T.KUMARASWAMI --02
Published on

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆ. 16ರಂದು ಬೆಳಗ್ಗೆ 11ಕ್ಕೆ ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಜಯಂತಿ ಸಂಬಂಧ ಸಮುದಾಯದ ಮುಖಂಡರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸವಿತಾ ಮಹರ್ಷಿ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ, ಗೀತಗಾಯನ ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷ ಚಂದ್ರಪ್ಪ, ಕಾರ್ಯದರ್ಶಿ ಎನ್.ಡಿ.ಕುಮಾರ್, ಮುಖಂಡ ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net