

ಚಿತ್ರದುರ್ಗ: ಪರಿಸರವನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸ ಬೇಕಾಗಿರುವುದು ಎಲ್ಲರ ಮುಂದಿರುವ ದೊಡ್ಡ ಸವಾಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಗೀತಾ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ಯೋಜನಾ ಕಚೇರಿಯಿಂದ ನಗರದ ಹೊಳಲ್ಕೆರೆ ರಸ್ತೆ ರುದ್ರಭೂಮಿಯಲ್ಲಿ ಮಂಗಳವಾರ ಗಿಡ ನೆಡುವ ಮೂಲಕ ಪರಿ ಸರ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ಅವರು ಪರಿಸರ ಸಂರಕ್ಷಣೆ ನಿಟ್ಟಿನ ಲ್ಲಿ ದಶಲಕ್ಷ ಸಸಿಗಳನ್ನು ನೆಡುವ ಅಭಿಯಾನಕ್ಕೆ ಈಚೆಗೆ ಬೆಳ್ತಂಗಡಿಯಲ್ಲಿ ಚಾಲನೆ ನೀಡಿದ್ದಾರೆ. ಪ್ರತಿಯೊಂದು ಯೋಜನಾ ಕಚೇರಿಯಿಂದ 5 ಸಾವಿರ ಸಸಿಗಳನ್ನು ನೆಡಲಾಗುವುದು.
ರುದ್ರಭೂಮಿ ಸೇರಿ ಖಾಲಿ ಜಾಗದಲ್ಲಿ ಸಸಿಗಳನ್ನು ನೆಡಲಾಗುವುದು. ಸಸಿಗಳನ್ನು ಪೋಷಿಸುವು ದು ಎಲ್ಲರ ಕರ್ತವ್ಯವಾಗಬೇಕೆಂದರು. ನಗರಸಭೆ ಮಾಜಿ ಅಧ್ಯಕ್ಷ ಎಚ್.ಮಂಜಪ್ಪ ಮಾತನಾಡಿ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಜನೋಪಯೋಗಿ ಕೆಲಸಗಳು ಆಗುತ್ತಿವೆ ಎಂದರು.
ರುದ್ರಭೂಮಿಯಲ್ಲಿ ಒಂದು ದೇವಸ್ಥಾನ ನಿರ್ಮಿಸಿ ನೀರಿನ ಸೌಕರ್ಯಕ್ಕಾಗಿ ಕೊಳವೆ ಬಾವಿ ಕೊರೆಸಿಕೊಡುವಂತೆ ಗೀತಾ ಅವರಿಗೆ ಮನವಿ ಮಾಡಿದರು. ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ,ಮಾಳೇಶ್,ಮೃತ್ಯುಂಜಯ,ಲಕ್ಷ್ಮಮ್ಮ,ಬಿ.ಅಶೋಕ್,ಸುರೇಶ್,ಶಿವಕುಮಾರ್, ಶ್ರೀಕಾಂತ್ ಮತ್ತಿತರರು ಇದ್ದರು.