ಸಹಕಾರ ಇಲಾಖೆ ಆದೇಶ ರದ್ದುಪಡಿಸಿದ ಹೈಕೋರ್ಟ್

rmm
Published on

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರನ್ನು ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ ಸಹಕಾರ ಇಲಾಖೆ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.

ಡಿಸಿಸಿ ಬ್ಯಾಂಕ್ ನಗರ ಶಾಖೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಅವರನ್ನು ಸಹಕಾರ ಇಲಾಖೆ ಸಂಯುಕ್ತ ನಿಬಂಧಕ ಪಾಂಡುರಂಗ ಗರ್ಗ್ ಅವರು ನಿರ್ದೇಶಕ ಸ್ಥಾನದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನೆ ಮಾಡಿ ಮಂಜುನಾಥ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮಂಜುನಾಥಗೌಡ ಅವರನ್ನು ನಿರ್ದೇಶಕ ಸ್ಥಾನದಿಂದ ಅಮಾನತುಗೊಳಿಸಿ ಆದೇಶ ಹೊರಡಿಸುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೊಷಣೆ ಮಾಡಲಾಗಿತ್ತು. ಸಹಕಾರ ಇಲಾಖೆ ಆದೇಶ ಪ್ರಶ್ನೆ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಹೈಕೋರ್ಟ್, ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಹೀಗಾಗಿ ಚುನಾವಣೆ ನಡೆದಿರಲಿಲ್ಲ.

ಈಗ ಹೈಕೋರ್ಟ್ ಸಹಕಾರ ಇಲಾಖೆ ಆದೇಶವನ್ನು ರದ್ದುಪಡಿಸಿದ್ದು, ಪ್ರಕರಣದ ಮರು ಪರಿಶೀಲನೆಗೆ ಹೊಸ ನಿಬಂಧಕರ ನೇಮಕಕ್ಕೆ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net