ಸಹಕಾರ ಕ್ಷೇತ್ರದಲ್ಲಿ ಮೀಸಲು ಶೀಘ್ರ ನಿರ್ಧಾರ: ಕೆ.ಎನ್.ರಾಜಣ್ಣ

KN Rajanna- CONG
Published on

ಮೈಸೂರು: ಸಹಕಾರ ಕ್ಷೇತ್ರದಲ್ಲಿಯೂ ಮೀಸಲಾತಿ ಜಾರಿಗೊಳಿಸುವ ಸಂಬಂಧ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಭರವಸೆ ನೀಡಿದರು. ಎಲ್ಲ ವರ್ಗದವರಿಗೂ ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಸಹಕಾರ ಕ್ಷೇತ್ರದ ನಾಮನಿರ್ದೇಶನ, ನೇಮಕಾತಿ, ಸಾಲ ವಿತರಣೆಯಲ್ಲಿಯೂ ಮೀಸಲಾತಿ ನೀಡಬೇಕು ಎನ್ನುವ ಬೇಡಿಕೆ ಬಹಳ ದಿನಗಳಿಂದ ಇದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ನೀಡುವ ಸಂಬಂಧ ವರದಿ ನೀಡಲು ಕೆ.ಎಚ್. ರಂಗನಾಥ್ ನೇತೃತ್ವದಲ್ಲಿ ಸಚಿವ ಸಂಪುಟದ ಉಪ ಸಮಿತಿ ನೇಮಕ ಮಾಡಲಾಗಿತ್ತು. ಆದರೆ ಅವಧಿಗೆ 6 ತಿಂಗಳ ಮುನ್ನವೇ ವಿಧಾನಸಭೆ ಚುನಾವಣೆ ನಡೆದಿದ್ದರಿಂದ ಅದು ಅಲ್ಲಿಯೇ ನಿಂತಿತು ಎಂದರು. ಈಗ ಮೀಸಲಾತಿ ಸಂಬಂಧ ಸಾಧಕ-ಬಾಧಕ ಕುರಿತು ನ್ಯಾ. ನಾಗಮೋಹನ್‌ದಾಸ್ ಅವರೊಂದಿಗೆ ಚರ್ಚಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಪಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net