ಸಹಕಾರ ಸಂಘಗಳ ಸೌಲಭ್ಯ ಸದುಪಯೋಗವಾಗಲಿ

26-GPT-4
ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಎಂ.ಪಿ.ಸುನೀಲ್ ಮಾತನಾಡಿದರು. ನಾಗರಾಜು, ಮಹದೇವಯ್ಯ, ಗುರಿಪಾದಪ್ಪ, ದಾಕ್ಷಾಯಣಮ್ಮ, ಅನ್ನಪೂರ್ಣಮ್ಮ, ಮಹದೇವಸ್ವಾಮಿ ಇದ್ದರು.
Published on

ಗುಂಡ್ಲುಪೇಟೆ: ಸಹಕಾರ ಬ್ಯಾಂಕ್‌ಗಳಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಂ.ಪಿ.ಸುನೀಲ್ ಹೇಳಿದರು.

ತಾಲೂಕಿನ ಮೂಡಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳು ತನ್ನ ಸದಸ್ಯರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ, ಉಪಕರಣ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಸಹಕಾರ ಸಂಘದಿಂದ ಪಡೆದ ಸಾಲವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ನಾಗರಾಜು, ನಿರ್ದೇಶಕರಾದ ಮಹದೇವಯ್ಯ, ಗುರಿಪಾದಪ್ಪ, ದಾಕ್ಷಾಯಣಮ್ಮ, ಅನ್ನಪೂರ್ಣಮ್ಮ, ಮಹದೇವಸ್ವಾಮಿ, ಸಿಇಒ ಚಂದ್ರಶೇಖರಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net