ಸಹಕಾರ ಸಂಘಗಳಲ್ಲಿ ರಾಜಕೀಯ ಸಲ್ಲದು

12blrp2
Published on

ಬೇಲೂರು: ರೈತರ ಅಭಿವೃದ್ಧಿಗೆ ಸೀಮಿತವಾಗಿರುವ ಸಹಕಾರ ಸಂಘಗಳಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ತರಬಾರದು. ಇದರಿಂದ ಸಹಕಾರ ಸಂಘಗಳ ಅಭಿವೃದ್ಧಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೇಳಿದರು.

ತಾಲೂಕಿನ ಹನಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಹಕಾರ ಸಂಘ ಮತ್ತು ಹಾಲಿನ ಡೇರಿಗಳು ರಾಜ್ಯದಲ್ಲಿಯೇ ಅತ್ಯುತ್ತಮ ಹೆಸರಿನೊಂದಿಗೆ ಉತ್ತಮ ಬೆಳವಣಿಗೆಯಾಗಲು ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣರ ಶ್ರಮ ಕಾರಣ. ತಾಲೂಕಿನ 30 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 26 ಸಂಘಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದಿರುವ ಸಂಘಗಳಿಗೂ ಮುಂದಿನ ದಿನಗಳಲ್ಲಿ ವ್ಯವಸ್ಥೆ ಕಲ್ಪಪಿಸಲು ಮುಂದಾಗಲಿದ್ದೇವೆ ಎಂದು ಭರವಸೆ ನೀಡಿದರು.

ಶಾಸಕ ಕೆ.ಎಸ್. ಲಿಂಗೇಶ್ ಮಾತನಾಡಿ, ಹನಿಕೆ ಗ್ರಾಮ ಪಂಚಾಯಿತಿ ಭಾಗದ ರೈತರು ಕರಗಡ ಸೊಸೈಟಿಯಲ್ಲಿ ಸಾಲ ಸೇರಿದಂತೆ ವಹಿವಾಟು ನಡೆಸುತ್ತಿದ್ದಾರೆ. ಆದರೆ, ಈಗ ಹನಿಕೆಯಲ್ಲೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪನೆಯಿಂದ ಇಲ್ಲಿನ ಅಕ್ಕಪಕ್ಕದ ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ. ನಾಗರಾಜ್ ಮಾತನಾಡಿದರು. ಬ್ಯಾಂಕ್ ಅಧ್ಯಕ್ಷ ನಾಗರಾಜ್, ನಿರ್ದೇಶಕ ರಾಮಚಂದ್ರೇಗೌಡ, ಹನಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಈರೇಗೌಡ, ಉಪಾಧ್ಯಕ್ಷ ಚಂದ್ರಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀರಾಜೀವ್, ಸಹಕಾರ ಸಂಘಗಳ ಉಪನಿಬಂಧಕ ಶಂಕರ್, ಸಕಲೇಶಪುರ ಉಪವಿಭಾಗದ ಸಹಾಯಕ ನಿಬಂಧಕ ಖಾಲಿದ್ ಅಹಮ್ಮದ್, ಜೆಡಿಎಸ್ ಮುಖಂಡರಾದ ಸಿ.ಎಚ್. ಮಹೇಶ್, ಭುವನೇಶ್, ದೊಡ್ಡವೀರೇಗೌಡ, ಮೇಲ್ವಿಚಾರಕ ದಿನೇಶ್, ಕಾರ್ಯದರ್ಶಿ ಎಚ್.ಪಿ. ಕುಮಾರ, ನಿರ್ದೇಶಕರಾದ ಶಾಂತವೀರಪ್ಪ, ಜಗದೀಶ್, ಗುರುಮೂರ್ತಿ, ಕುಮಾರ್, ಪ್ರಸನ್ನಕುಮಾರ್, ಗಿರೀಶ್, ಯಶೋಧ, ಗಂಗಮ್ಮ, ಗೀತಾ, ಸಂಘದ ಇಒ ಜಗದೀಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net