ಸಹಕಾರ ಸಂಘಗಳಿಗೆ ಹೆಚ್ಚಿನ ಅನುದಾನ

Published on

ಗುಂಡ್ಲುಪೇಟೆ: ತಾಲೂಕಿನ ಸಹಕಾರ ಸಂಘಗಳಿಗೆ ಒಕ್ಕೂಟದಿಂದ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಹೇಳಿದರು.

ತಾಲೂಕಿನ ಹಂಗಳ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಜಿಲ್ಲಾ ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿದ್ದು ಹೆಚ್ಚಿನ ಮತ ನೀಡಿದ ತಾಲೂಕಿನ ಸಂಘಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಹೆಚ್ಚಿನ ಸವಲತ್ತುಗಳನ್ನು ಒದಗಿಸಲಾಗುವುದು. ದಿ.ಮಹದೇವಪ್ರಸಾದ್ ಚಾಮರಾಜನಗರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಮಾಡಿದಂತೆ ಮೈಸೂರು ಚಾಮರಾಜನಗರ ಸಹಕಾರ ಬ್ಯಾಂಕ್ ವಹಿವಾಟು ಹೆಚ್ಚಿಸಿ ಜಿಲ್ಲೆಗೆ ಪ್ರತ್ಯೇಕ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು. ಗ್ರಾಮದ ಸಹಕಾರ ಸಂಘವು ಸದಸ್ಯರಿಗೆ ಸಾಲ ಸೌಲಭ್ಯ ನೀಡುವ ಜತೆಗೆ ವಸೂಲಾತಿಯನ್ನು ಉತ್ತಮವಾಗಿ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಸಂಘದ ಅಧ್ಯಕ್ಷ ರವಿ, ಮುಖಂಡ ವೀರಭದ್ರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net