ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ

01 HANUR 3
Published on

ಹನೂರು: ಪ್ರತಿಯೊಬ್ಬರೂ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಶಿವರಾಜು ಕಿವಿಮಾತು ಹೇಳಿದರು.

ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಶುಕ್ರವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರ ಸಂಕಿರಣ, ವಸ್ತು ಪ್ರದರ್ಶನ ಹಾಗೂ ನಾಟಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದರಿಂದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗಿದೆ. ತಾರ್ಕಿಕ ಹಾಗೂ ಚಿಂತನಾಶಕ್ತಿಯೂ ವೃದ್ಧಿಗೊಳ್ಳಲಿದೆ ಎಂದರು.

ಇದೇ ವೇಳೆ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಸಿರಿಧಾನ್ಯಗಳ ಮಹತ್ವದ ಬಗ್ಗೆ ತಿಳಿಸಿ ಕೊಡಲಾಯಿತು. ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ, ನಾಟಕ ಹಾಗೂ ವಿಚಾರ ಸಂಕಿರಣ ನಡೆಯಿತು.

ಡಯಟ್ ಉಪನ್ಯಾಸಕ ಅರಸುಶೆಟ್ಟಿ, ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹದೇವ, ಮುಖ್ಯಶಿಕ್ಷಕರಾದ ಶಿವಶಂಕರನಾಯ್ಕ, ಬಸವರಾಜು, ಕಾಂತರಾಜು ಹಾಗೂ ವಿವಿಧ ಶಾಲೆಯ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net