

ಯಾದಗಿರಿ: ತುತರ್ು ನೆರವು ಅಗತ್ಯವಿರುವ ಮಕ್ಕಳಿಗೆ ರಕ್ಷಣೆಯನ್ನು ಪಡೆಯಲು ಜಿಲ್ಲಾ ಮಟ್ಟದ ಮಕ್ಕಳ ಸಹಾಯವಾಣಿಯ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಕಾರಿ ಸ್ನೇಹಲ್ ಆರ್., ಸಲಹೆ ನೀಡಿದರು.
ಬುಧವಾರ ಇಲ್ಲಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಮಕ್ಕಳ (ಕಲ್ಯಾಣ) ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಮಕ್ಕಳ ಸಹಾಯವಾಣಿ 1098 ಸಂಖ್ಯೆ ರಾಷ್ಟ್ರ ವ್ಯಾಪ್ತಿ ಚಾಲ್ತಿಯಲ್ಲಿರುವುದರಿಂದ ಕರೆ ಮಾಡಿದಾಗ ಸಂಪರ್ಕವು ಕಾರ್ಯನಿರತವಾಗಿದೆ ಎಂಬ ಸಿಗ್ನಲ್ ಬಂದರೆ ಅಥವಾ ಇನ್ನಿತರ ತಾಂತ್ರಿಕ ಕಾರಣಗಳಿಂದ ಕರೆ ಸ್ವೀಕೃತವಾಗದಿದ್ದರೆ ಜಿಲ್ಲಾ ಮಟ್ಟದ ಸಹಾಯವಾಣಿ ( ಪೊಲೀಸ್ ಕಂಟ್ರೋಲ್ ರೂಂ 9480803600)ಗೆ ಕರೆಮಾಡುವ ಮೂಲಕ ಮಕ್ಕಳಾಗಲಿ ಅಥವಾ ಸಾರ್ವಜನಿಕರಾಗಲಿ ತುತರ್ು ನೆರವು ಅಗತ್ಯವಿರುವ ಮಕ್ಕಳು ರಕ್ಷಣೆಯನ್ನು ಪಡೆಯಬಹುದಾಗಿದೆ ಎಂದರು.
ಈ ಸಹಾಯವಾಣಿ ಸಂಕಷ್ಟದಲ್ಲಿರುವ ಮಕ್ಕಳ ಪಾಲಿನ ಸಂಜೀವಿನಿಯಾಗಿದೆ. ಅವರ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಎಳೆಯರ ಹಕ್ಕುಗಳಿಗೆ ಧಕ್ಕೆಯಾಗದಂತೆ ಶ್ರಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಶಾಲೆಯಿಂದ ಹೊರಗುಳಿದು ಶಿಕ್ಷಣದಿಂದ ಮಕ್ಕಳು ವಂಚಿತರಾಗದಂತೆ ಮತ್ತು ವಂಚಿತರಾಗಲು ಕಾರಣಗಳನ್ನು ಹುಡುಕಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಿ ಎಂದು ಸಂಬಂಸಿದ ಅಕಾರಿಗಳಿಗೆ ನಿದರ್ೇಶನ ನೀಡಿದರು.
ಪ್ರತಿದಿನ ಬೆಳಗಿನ ಪ್ರಾರ್ಥನೆಯ ಸಂದರ್ಭದಲ್ಲಿ ಮಕ್ಕಳಿಗೆ ಸಮಸ್ಯೆಯಾದರೆ 1098 ಅಥವಾ 112 ಸಂಖ್ಯೆಗೆ ಕರೆ ಮಾಡುತ್ತೇವೆ ಎಂಬ ಧ್ಯೇಯವಾಕ್ಯದೊಂದಿಗೆ ಶಪಥ ಮಾಡುವಂತೆ ರೂಢಿಸಿಕೊಳ್ಳಲು ಪ್ರೇರಣೆ ನೀಡಬೇಕು. ಬಾಲ್ಯ ವಿವಾಹ, ಬಾಲಕಾಮರ್ಿಕರು, ಭಿಕ್ಷಾಟನೆ, ಮಕ್ಕಳ ಮಾರಾಟ, ಕಾಣೆಯಾದ ಹಾಗೂ ಹಿಂಸೆ ಮತ್ತು ದೌರ್ಜನ್ಯಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳ ಹಿತ ಕಾಪಾಡಬೇಕು ಎಂದು ಸೂಚನೆ ನೀಡಿದರು.
ಕಳೆದ ಎರಡು ವರ್ಷದಲ್ಲಿ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 173 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಅದರಂತೆ ವಿವಾಹ ಜರಗುವ ಜಿಲ್ಲೆಯ ಎಲ್ಲ ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ಆಯೋಜಕರಿಗೆ ಬಾಲ್ಯವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ನಾಮಫಲಕ ಅಳವಡಿಸಬೇಕು. ಜಿಲ್ಲೆಯ ಸಂಕಷ್ಟದಲ್ಲಿರುವ ಮಕ್ಕಳ ವೈದ್ಯಕೀಯ ತಪಾಸಣೆಗೆ ಮತ್ತು ಚಿಕಿತ್ಸೆಗೆ ಹಾಗೂ ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ ಪಡೆಯಲು ಸಕರ್ಾರಿ ಆಸ್ಪತ್ರೆಗಳಲ್ಲಿ ಉಚಿತ ಸೇವೆ ಒದಗಿಸುವಂತೆ ಆರೋಗ್ಯ ಇಲಾಖೆ ಅಕಾರಿಗಳಿಗೆ ತಿಳಿಸಿದರು.